ಚಿಕ್ಕಬಳ್ಳಾಪುರ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ, ನೀಟ್ಗೆ ಹಾಜರಾದ ವಿದ್ಯಾರ್ಥಿಗಳು ವೆಬ್ಸೈಟ್ kmdconline.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮೇ 30 ರೊಳಗೆ ಸಲ್ಲಿಸಬಹುದು.

ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ, 08156-277047 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ₹ 2,500 ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಅರ್ಜಿಗಳನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ https://khtigadag.ac.in/Lateralentryadmissionform.pdf ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ- 582102 ಇವರಿಗೆ ಮೇ 30ರೊಳಗೆ ಸಲ್ಲಿಸಬೇಕು. ವಿವರಗಳಿಗೆ 9916143619, 08372-259664, 9945594959 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-1900347783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.