ಚಿಕ್ಕಮಗಳೂರು: ಬ್ರಹ್ಮಾವರದಲ್ಲಿರುವ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾಲೇಜಿನಲ್ಲಿ 2026-27ನೇ ಸಾಲಿನ 2 ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಕನ್ನಡ ಮಾಧ್ಯಮದಲ್ಲಿ 4 ಸೆಮಿಸ್ಟರ್ ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ 45 ಅಂಕ ಪಡೆದಿರಬೇಕು (ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ 40 ಅಂಕ). ಈ ವರ್ಷದ ಜೂನ್ 12ಕ್ಕೆ ಅಭ್ಯರ್ಥಿಗಳ ವಯಸ್ಸು 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು www.uahs.edu.in ವೆಬ್ಸೈಟ್ನಲ್ಲಿ ಜೂನ್ 12ರವರೆಗೆ ಡೌನ್ಲೋಡ್ ಮಾಡಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಜೂ.12ರೊಳಗೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-113329607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.