ಚಿಕ್ಕಮಗಳೂರು: 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿಎಚ್ಟಿಟಿ) ಕೋರ್ಸ್ ಕಲಿಕೆಗಾಗಿ 39 ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ₹2,500ರಂತೆ ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15ರಿಂದ 23ರ ವಯೋಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಡಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿವೆ.

ಅರ್ಜಿಗಳನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ (https://khtigadag.ac.in/AdmissionForm.pdf) ಬಳಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30ರೊಳಗಾಗಿ ಸಲ್ಲಿಸಲು ಈ ಕಚೇರಿಯ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೆ.ಎಂ ರಸ್ತೆ, ಚಿಕ್ಕಮಗಳೂರು (08262-295880) ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 (08372-259664, 9916143619) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-1660470420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.