ಚಿತ್ರದುರ್ಗ: ‘ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿ ಗಳಿಗೆ ಏಕಾಗ್ರತೆ ಅತ್ಯಂತ ಮುಖ್ಯವಾದುದು. ಉನ್ನತ ಗುರಿಯೊಂದಿಗೆ ಸಂಯಮದಿಂದ ಅಧ್ಯಯನ ನಡೆಸಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಬಹುದು’ ಎಂದು ಶಿಕ್ಷಣ ತಜ್ಞ ಬಿ.ಮಂಜುನಾಥ್ ಹೇಳಿದರು.

ಬಾಬು ಜಗಜೀವನ ರಾಂ ಜಯಂತಿ ಅಂಗವಾಗಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರಳ ಹಾಗೂ ಸಹಜವಾಗಿರುವ ಪ್ರಶ್ನೆಗಳಿಗೇ ವಿದ್ಯಾರ್ಥಿಗಳು ತಪ್ಪು ಉತ್ತರ ಬರೆಯುತ್ತಾರೆ. ಮೇಲ್ನೋಟಕ್ಕೆ ಪ್ರಶ್ನೆಗಳು ಸುಲಭವಿರುವಂತೆ ಕಂಡರೂ ಅವುಗಳ ಒಳಾರ್ಥವನ್ನು ಅರ್ಥ ಮಾಡಿಕೊಳ್ಳದಿದ್ದರೆ ನಾವು ಅಂಕಗಳನ್ನು ಕಳೆದುಕೊಳ್ಳುತ್ತೇವೆ. ಹೀಗಾಗಿ ಪ್ರಶ್ನೆ ಪತ್ರಿಕೆಗಳ ಮಾದರಿಯನ್ನು ಅಧ್ಯಯನ ಮಾಡಿ ಬಹಳ ಚಿಂತಿಸಿ ಪ್ರಶ್ನೆಗಳಿಗೆ ಉತ್ತರ ಬರೆಯಬೇಕು. ಹೀಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಬೇತಿ ಅತ್ಯಂತ ಅವಶ್ಯವಾದುದು’ ಎಂದು ಹೇಳಿದರು.

‘ಪರೀಕ್ಷೆಗಳಲ್ಲಿ ಬಹುತೇಕ ಪ್ರಶ್ನೆಗಳು ವ್ಯಂಗ್ಯದ ರೀತಿಯಲ್ಲಿ ಬರುತ್ತವೆ. ಸುಲಭವಾಗಿ ಗೊತ್ತಿರುವ ವಿಚಾರವನ್ನು ಸುತ್ತಿ ಬಳಸಿ ಕೇಳಿರುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಚಿಂತನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಇತಿಹಾಸ, ಭೂವಿಜ್ಞಾನ, ಆರ್ಥವಿಚಾರ, ಭೌತ ವಿಜ್ಞಾನ, ರಸಾಯನ ವಿಜ್ಞಾನ ವಿಷಯಗಳನ್ನು ಹೆಚ್ಚು ಅಧ್ಯಯನ ಮಾಡಿ ಮನನ ಮಾಡಿಕೊಳ್ಳಬೇಕು. ಪದವಿ ತರಗತಿಗಳ ರೀತಿಯಲ್ಲಿ ಅಧ್ಯಯನ ಮಾಡದೇ ಒಳನೋಟದೊಂದಿಗೆ ಓದಬೇಕು’ ಎಂದು ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿ ಕಾಂತರಾಜು, ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-44-157459936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.