ದಾವಣಗೆರೆ: ಶಿಕ್ಷಣ ಬದುಕಿಗೆ ದಾರಿದೀಪವಾಗಬೇಕು. ಶ್ರಮಪಟ್ಟು ವ್ಯಾಸಂಗ ಮಾಡಿದಾಗ ಮಾತ್ರ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.

ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಭದ್ರಾ ಸ್ನಾತಕೋತ್ತರ ಕೇಂದ್ರದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜ್ಞಾನ ಹೆಚ್ಚಾದಷ್ಟು ಜೀವನದಲ್ಲಿ ಮುಂದೆ ಬರಲು ಸಾಧ್ಯ. ವಿದ್ಯಾವಂತ ಯುವತಿಯರು ಕಂಪನಿಗಳನ್ನು ಸ್ಥಾಪಿಸಲು ಸರ್ಕಾರ ಸಾಲ ಸೌಲಭ್ಯ ನೀಡಲಿದೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉದ್ಯೋಗಕ್ಕೆ ಹೆಚ್ಚು ಮಹತ್ವ ನೀಡಬೇಕು. ಉದ್ಯೋಗ ನೀಡುವ ಉದ್ಯಮಿಗಳಾಗಬೇಕು’ ಎಂದು ಸಲಹೆ ನೀಡಿದರು.

ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ, ಪ್ರಾಂಶುಪಾಲ ಪ್ರೊ.ಟಿ ಮುರುಗೇಶ್, ಎಂ.ಸಂಕೇತ್, ಕೊಟ್ರೇಶ್ ಸಿ., ಮಂಜುನಾಥ್ ಪ್ರಸಾದ್, ಸುಮಾ ಎಂ.ವಿ. ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-1291943754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.