ದಾವಣಗೆರೆ: ನಗರದ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ಹಾಗೂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುತ್ತಿರುವ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಸಂಕಲ್ಪ’ಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಶನಿವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮೇ 24ರಂದು ನಡೆಯಲಿರುವ ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.

‘ಯುಪಿಎಸ್ಸಿ ಪರೀಕ್ಷೆ ಕಠಿಣ, ಸ್ಪರ್ಧಾತ್ಮಕವಾದರೂ ಯಶಸ್ಸಿನ ದಾರಿಗೆ ದೀಪವಾಗುತ್ತದೆ. ಅಂಕಗಳಿಗಿಂತ ಸಮಾಜಕ್ಕೆ ಕೊಡುಗೆ ನೀಡುವ ದೃಷ್ಟಿಕೋನವೇ ಶಾಶ್ವತ ಪ್ರೇರಣೆ’ ಎಂದು ಹೇಳಿದರು.

‘ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ, ಶಾಂತಿ ಮತ್ತು ಸಮರ್ಪಕ ಸಿದ್ಧತೆಯ ಮೇಲೆ ನಂಬಿಕೆ ಇಡುವುದು ಅತ್ಯಗತ್ಯ. ಹೆಚ್ಚಾಗಿ ಆಲೋಚಿಸದೇ ಮೊದಲ ನಿರ್ಧಾರವನ್ನು ನಂಬಿ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-1897567975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.