ದೇವದುರ್ಗ: ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಸತತ ಪರಿಶ್ರಮ ಇದ್ದರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಸ್ಪರ್ಧಾತ್ಮಕ ಪರೀಕ್ಷೆ ತರಬೇತುದಾರ ಶರಣಯ್ಯ ಭಂಡಾರಿಮಠ ಹೇಳಿದರು.

ಪಟ್ಟಣದಲ್ಲಿ ಭಾನುವಾರ ರಾಯಚೂರಿನ ರವಿ ಪಾಟೀಲ ಫೌಂಡೇಶನ್ ಮತ್ತು ತಾಲ್ಲೂಕು ಅತಿಥಿ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಮತ್ತು ಯಶಸ್ಸು ವಿಷಯ ಕುರಿತು ನಡೆದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಉಪನ್ಯಾಸ ನೀಡಿದರು.

ಉತ್ತರ ಕರ್ನಾಟಕದ ಬಹುತೇಕ ವಿದ್ಯಾರ್ಥಿಗಳು ಕೌಟುಂಬಿಕ ಸಮಸ್ಯೆಗಳಿಗೆ ಕುಗ್ಗುತ್ತಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾಣುತ್ತಿಲ್ಲ. ನಿರ್ದಿಷ್ಟ ಹುದ್ದೆ ಗುರಿ ಹೊಂದದ ಹಿನ್ನೆಲೆ ಓದಿನಲ್ಲಿ ಆಸಕ್ತಿ ಕಡಿಮೆ ಹೊಂದಿದ್ದಾರೆ. 5ನೇ ತರಗತಿಯಿಂದ 12ನೇ ತರಗತಿವರೆಗೆ ಸರ್ಕಾರಿ ಪಠ್ಯಪುಸ್ತಕಗಳನ್ನು ನಿರಂತರವಾಗಿ ಅಧ್ಯಯನ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗೆ ಭದ್ರ ಬುನಾದಿ ಹಾಕಿಕೊಳ್ಳಬೇಕು. ಕೌಟುಂಬಿಕ ಸಮಸ್ಯೆಗಳಿಗೆ ಕುಗ್ಗದೆ ಮಾನಸಿಕವಾಗಿ ಹೊರಬಂದು ತಂದೆ ತಾಯಿಗಳ ಕನಸು ಈಡೇರಿಸಲು ದಿನಕ್ಕೆ ಕನಿಷ್ಠ 10 ಗಂಟೆ ಅಧ್ಯಯನ ಮಾಡಿ’ ಎಂದರು.

ರವಿ ಪಾಟೀಲ ಫೌಂಡೇಶನ್ ಅಧ್ಯಕ್ಷ ರವಿ ಪಾಟೀಲ, ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಅಧ್ಯಕ್ಷ ರಂಗಪ್ಪ ನಾಯಕ, ಉಪನ್ಯಾಸ ಕೆ. ವಿನೋದ ಕುಮಾರ ಹೀರೆಬೂದೂರು, ಬುದ್ದಯ್ಯ ನಾಯಕ, ಸಿದ್ದಲಿಂಗ ಮುಂಡರಗಿ ಮತ್ತು ತಾಲ್ಲೂಕಿನ ಸುಮಾರು 500ಕ್ಕೂ ಸ್ಪರ್ಧಾಕಾಂಕ್ಷಿಗಳು ಭಾಗವಹಿಸಿದ್ದರು.

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮಹಿಳಾ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-32-554865983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.