ಧಾರವಾಡ: ‘ವಿದ್ಯಾರ್ಥಿಗಳು ಶಿಕ್ಷಣದ ಆರಂಭಿಕ ಹಂತದಲ್ಲಿ ಗುರಿಯನ್ನು ನಿಗದಿಪಡಿಸಿಕೊಳ್ಳಬೇಕು. ಆ ಕ್ಷೇತ್ರದಲ್ಲಿ ಪರಿಣಿತಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹೇಳಿದರು.

ನಗರದ ಶಿಕ್ಷಕಿಯರ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಈಚೆಗೆ ಆಯೋಜಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ಕೆರಿಯರ್ ಮೇಳ, ವೃತ್ತಿ ಮಾರ್ಗದರ್ಶನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು. ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಸೇರಿದರೆ ಉದ್ಯೋಗ ಪಡೆಯಲು ಅನುಕೂಲ ಆಗುತ್ತದೆ. ವೃತ್ತಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು. ಶ್ರೇಷ್ಠತೆಯನ್ನು ಸಾಧಿಸುವ ಸಂಕಲ್ಪ ಮಾಡಬೇಕು’ ಎಂದು ತಿಳಿಸಿದರು.

ಡಿಡಿಪಿಐ ಎಸ್.ಎಸ್. ಕೆಳದಿಮಠ ಮಾತನಾಡಿ, ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಯಶಸ್ಸು ಸಾಧಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಡಿಡಿಪಿಐ (ಅಭಿವೃದ್ಧಿ) ಬಸವರಾಜ ನಾಲತವಾಡ, ಪ್ರಾಚಾರ್ಯ ರವಿಕುಮಾರ ಬಾರಾಟಕ್ಕೆ, ಡಿವೈಪಿಸಿ ಎಸ್.ಎಂ. ಹುಡೇದಮನಿ, ಬಿಇಒ ರಾಮಕೃಷ್ಣ ಸದಲಗಿ, ದೀಪಕ್ ಕುಲಕರ್ಣಿ, ಜಿಟಿಟಿಸಿಯ ಬಸವರಾಜ ಹೂಗಾರ, ಸ್ಕೌಟ್ಸ್ ಮತ್ತು ಗೈಡ್ಸ್ನ ಶ್ರೀಶೈಲ ಕರಿಕಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಭಜಂತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-24-1946611312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.