ದೊಡ್ಡಬಳ್ಳಾಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗಾಗಿ ಈಚೆಗೆ ‘ವಿದ್ಯಾಭ್ಯಾಸದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ’ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಶಿಕ್ಷಣ ಮುಗಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗೆ ಓದುವ ಬದಲು ವಿದ್ಯಾಭ್ಯಾಸದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ದಗೊಳ್ಳುವುದು ಉತ್ತಮ ಎಂದು ಸಲಹೆ ಮಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವ ತಯಾರಿ ಮತ್ತು ವಿಷಯಗಳ ಆಯ್ಕೆ ನಿರ್ಣಾಯಕ ಪಾತ್ರ ವಹಿಸುತ್ತವೆ. ಪರೀಕ್ಷೆಗಳಲ್ಲಿ ಎದುರಿಸಹುದಾದ ಪ್ರಶ್ನೆಗಳ ಮಾದರಿ ಮತ್ತು ಪರಿಕಲ್ಪನೆ ಇರಬೇಕು. ಸಕಾರಾತ್ಮಕ ಚಿಂತನೆಗಳ ಮೂಲಕ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಬರೆಯುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಉಚಿತ ತರಬೇತಿ ನೀಡುವ ಯೋಜನೆ ಹೊಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದಗೊಳ್ಳುವ ವಿದ್ಯಾರ್ಥಿಗಳಿಗೆಅಗತ್ಯ ಪುಸ್ತಕ,ಪರಿಕರ,ವಿಷಯ ತಜ್ಞರಿಂದ ಮಾರ್ಗದರ್ಶನ ನೀಡುವ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ ಹೇಳಿದರು.

ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ,ಕಸಾಪ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಜಿ.ಸುರೇಶ್, ಸಾಸಲು ಹೋಬಳಿ ಕಸಾಪ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ವಿದ್ಯಾರ್ಥಿ ನಿಲಯ ಪಾಲಕರಾದ ರಾಧಮಣಿ, ಸಿ.ಅಣ್ಣಯ್ಯ, ವಿದ್ಯಾರ್ಥಿನಿಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-15-29006344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.