ಗದಗ: ‘ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಓದು ಅವಶ್ಯವಾಗಿದೆ. ವೃತ್ತಿ ಮಾರ್ಗದರ್ಶನ ಪಡೆದ ವ್ಯಕ್ತಿಗೆ ಉದ್ಯೋಗ ಹಿಡಿಯುವ ದಾರಿ ಸುಗಮಗೊಳ್ಳುವುದು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಜಿಲ್ಲಾಡಳಿತ, ಸಮಗ್ರ ಶಿಕ್ಷಣ ಕರ್ನಾಟಕದ ಆಶ್ರಯದಲ್ಲಿ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಆವರಣದಲ್ಲಿ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಏರ್ಪಡಿಸಿದ್ದ ಕರಿಯರ್ ಮೇಳ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಮುಂದಿನ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ವೃತ್ತಿ ಮಾರ್ಗದರ್ಶನ ಘಟಕವನ್ನು ರಾಜ್ಯದ ಎಲ್ಲ ಜಿಲ್ಲೆಗಳ ಡಯಟ್ಗಳಲ್ಲಿ ತೆರೆಯುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ಗದಗ ನಗರದಲ್ಲಿ ಕೂಡ ಈ ಘಟಕವನ್ನು ಪ್ರಾರಂಭಿಸಲಾಗಿದೆ’ ಎಂದರು.

‘ಜಿಲ್ಲೆಯ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಘಟಕದಲ್ಲಿರುವ ವಿಷಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಮಾರ್ಗದರ್ಶನ ಪಡೆದುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಪೂರಕವಾದ ಗ್ರಂಥಗಳು, ಉನ್ನತ ಕೋರ್ಸ್ಗಳ ಮಾಹಿತಿ ಪುಸ್ತಕಗಳಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದು. ಕಂಪ್ಯೂಟರ್, ಅಂತರ್ಜಾಲ ಸೌಲಭ್ಯವೂ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

‘ವಿದೇಶದಲ್ಲಿ ವ್ಯಾಸಂಗ ಮಾಡುವುದಕ್ಕೂ ಭಾರತದಲ್ಲಿ ಅಧ್ಯಯನ ಮಾಡುವುದಕ್ಕೂ ಇಂದಿನ ದಿನಗಳಲ್ಲಿ ಬಹಳ ವ್ಯತ್ಯಾಸವಿಲ್ಲ. ವಿದೇಶಗಳಲ್ಲಿ ದೊರಕುವಂತಹ ಎಲ್ಲ ಸಂಪನ್ಮೂಲಗಳು, ವಿಷಯ ತಜ್ಞರು ಭಾರತದಲ್ಲಿಯೂ ಲಭ್ಯವಿದ್ದಾರೆ. ಕಲಿಕಾ ಸಾಮಗ್ರಿ, ಮಾಹಿತಿ ಮತ್ತು ತಂತ್ರಜ್ಞಾನದ ಮೂಲಕ ಸಾಧಿಸಬೇಕೆಂಬ ಛಲವಿದ್ದರೆ ಉನ್ನತ ಸಾಧನೆ ಮಾಡಬಹುದಾಗಿದೆ’ ಎಂದರು.

ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಡಯಟ್ ಹಿರಿಯ ಉಪನ್ಯಾಸಕ ಬಿ.ಎಫ್.ಅರವಟಗಿ, ಡಯಟ್ ಉಪನ್ಯಾಸಕ ಕೆ.ವೈ.ವಿಭೂತಿ, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕಿರೇಸೂರ, ಅಧೀಕ್ಷಕಿ ಶೈಲಜಾ ತಟ್ಟಿ ಉಪಸ್ಥಿತರಿದ್ದರು.

ಡಯಟ್ ಅಧೀಕ್ಷಕ ಶ್ರೀನಿವಾಸ ಕುಲಕರ್ಣಿ ಪ್ರಾರ್ಥಿಸಿದರು. ಉಪನ್ಯಾಸಕರಾದ ಎಚ್.ಬಿ.ರಡ್ಡೇರ ಸ್ವಾಗತಿಸಿದರು. ಯಲ್ಲಪ್ಪ ಹಂದ್ರಾಳ ನಿರೂಪಿಸಿದರು. ಜಿ.ಡಿ.ದಾಸರ ವಂದಿಸಿದರು.

ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ ಚಿತ್ರಪ್ರದರ್ಶನ, ವಿವಿಧ ಇಲಾಖೆ ಯೋಜನೆಗಳ ಕುರಿತು ಹಾಗೂ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ಗಣಿತ ಪ್ರಯೋಗಳ ಮಳಿಗೆಗಳು ಗಮನ ಸೆಳೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-23-209446956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.