ಗದಗ: ‘ವಿಶ್ವಗುರು ಬಸವಣ್ಣನವರ ತತ್ವವನ್ನು ಅಳವಡಿಸಿಕೊಂಡು, ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇವೆ ತಲುಪಿಸುವುದೇ ನನ್ನ ಗುರಿ’ ಎಂದು ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ದೇಶಕ್ಕೆ 53ನೇ ರ್ಯಾಂಕ್ ಪಡೆದ ಕಿರಣ್ ಕಮತೆ ಹೇಳಿದರು.

ನಗರದ ತೋಂಟದಾರ್ಯ ಮಠದ 2026ನೇ ಜಾತ್ರಾ ಮಹೋತ್ಸವದ ಮಹಾರಥೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಯ ಕನಸು ಹೊತ್ತು ಕೋವಿಡ್ ಲಾಕ್ಡೌನ್ ಪೂರ್ವದಲ್ಲೇ ತಯಾರಿ ಆರಂಭಿಸಿದೆ. ಯುಪಿಎಸ್ಸಿ ಪರೀಕ್ಷೆಯ ಯಾವುದೇ ಹಂತದಲ್ಲಿ ಅನುತ್ತೀರ್ಣಗೊಂಡರೂ ಮತ್ತೇ ಮೊದಲಿನಿಂದಲೇ ಶುರು ಮಾಡಬೇಕು. ಹಾಗಾಗಿ ಇದು ಕ್ಲಿಷ್ಟಕರ ಪರೀಕ್ಷೆಯಾಗಿದ್ದು, ನಾನು ಆರನೇ ಹಾಗೂ ಕೊನೆಯ ಪ್ರಯತ್ನದಲ್ಲಿ ಯಶಸ್ಸು ಕಂಡೆ’ ಎಂದು ಹೇಳಿದರು.

‘ಸತತ ಪರಿಶ್ರಮದಿಂದ ಪ್ರಾಥಮಿಕ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಪಾಸಾಗಿ ಕರ್ನಾಟಕಕ್ಕೆ ಮೊದಲ ಸ್ಥಾನ ಹಾಗೂ ದೇಶಕ್ಕೆ 53ನೇ ರ್ಯಾಂಕ್ ಪಡೆದೆ. ನನ್ನ ಕನಸಿಗೆ ಮಾರ್ಗದರ್ಶನ ನೀಡಿದ ತಂದೆ-ತಾಯಿಗಳು ಹಾಗೂ ಸ್ನೇಹಿತರಿಗೆ ಋಣಿಯಾಗಿದ್ದು, ತೋಂಟದಾರ್ಯ ಮಠದ ಆಶೀರ್ವಾದವೂ ನನ್ನ ಬೆನ್ನಿಗಿದೆ. ನಾನು 9 ಹಾಗೂ ಹತ್ತನೇ ತರಗತಿಯನ್ನು ಗದುಗಿನಲ್ಲೇ ವ್ಯಾಸಂಗ ಮಾಡಿರುವ ಕಾರಣ, ಈ ಜಿಲ್ಲೆಗೂ ನನಗೂ ವಿಶೇಷವಾದ ನಂಟಿದೆ’ ಎಂದರು.

ನ್ಯೂಯಾರ್ಕ್ನ ವಿಶ್ವಸಂಸ್ಥೆಯ ವಿಶ್ವ ರಾಷ್ಟ್ರಗಳ ಅಭಿವೃದ್ಧಿ ಕಾರ್ಯಕ್ರಮ ಸಮಿತಿಯಿಂದ 2025ನೇ ಸಾಲಿನ ಇಕ್ವೇಟರ್ ಪ್ರಶಸ್ತಿ ಪಡೆದ ಬೀಬಿ ಫಾತಿಮಾ ಸಂಘದ ಅಧ್ಯಕ್ಷೆ ಬೀಬಿಜಾನ್ ಹಳೇಮನಿ ಹಾಗೂ ಕೆಎಲ್ಇ ಸಂಸ್ಥೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಮುನವಳ್ಳಿ ಅವರನ್ನು ಸನ್ಮಾನಿಸಲಾಯಿತು. ಅದೇರೀತಿ ಬೀದರ್ ಭಾತಂಬ್ರಾ ವಿರಕ್ತಮಠದ ಗುರುಬಸವ ಸ್ವಾಮೀಜಿಯವರಿಗೆ ‘ಸಮಾಜ ಸೇವಾರತ್ನ’ ಹಾಗೂ ಸಂಖ ವಿರಕ್ತಮಠದ ಶಿವಲಿಂಗೇಶ್ವರ ಸ್ವಾಮೀಜಿಯವರಿಗೆ ‘ಬಸವ ಚೇತನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತೋಂಟದ ಸಿದ್ಧರಾಮ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಕಲಬುರಗಿ ರೋಜಾ ಹಿರೇಮಠದ ಕೆಂಚಬಸವ ಶಿವಾಚಾರ್ಯ ಸ್ವಾಮೀಜಿ, ರಟಕಲ್ಲ ಹಿರೇಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು.

ಮಾಜಿ ಸಚಿವ ಎಸ್.ಎಸ್ ಪಾಟೀಲ, ಮಾಜಿ ಸಂಸದ ಐ.ಜಿ.ಸನದಿ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಪ್ರೊ.ಎಸ್.ಎಸ್.ಪಟ್ಟಣಶೆಟ್ಟರ, ದೆಹೆಲಿ ಜಾಟವಾ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ವಿನಾಯಕ ಮಾನ್ವಿ ಸ್ವಾಗತಿಸಿದರು. ಜಿಲ್ಲಾ ಕದಳಿ ಮಹಿಳಾ ವೇದಿಕೆ, ನಿಮಿಷಾಂಬಾ ನೃತ್ಯ ವೇದಿಕೆ ಹಾಗೂ ಬಸವೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ವಚನ ನೃತ್ಯ ಜರುಗಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-23-217813363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.