ಗೋಕಾಕ: ‘ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ನಿರ್ದಿಷ್ಟ ಗುರಿಯೊಂದಿಗೆ ನಿರಂತರ ಅಧ್ಯಯನಶೀಲರಾದರೆ ಯಶಸ್ಸು ನಿಶ್ಚಿತ’ ಎಂದು ಐಎಫ್ಎಸ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಥಣಿಯ ಬಸವರಾಜ ಕೆಂಪವಾಡ ಹೇಳಿದರು.

ಕೆಎಲ್ಇ ಸಂಸ್ಥೆಯ ಇಲ್ಲಿನ ಸಿ.ಎಸ್.ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಅಧ್ಯಯನಶೀಲ ವಿದ್ಯಾರ್ಥಿಗಳಿಗಾಗಿ ಬುಧವಾರ ಹಮ್ಮಿಕೊಂಡಿದ್ದ ಪ್ರೇರಣಾ ಕಾರ್ಯಕ್ರಮ ‘ಕಿಚ್’ನಲ್ಲಿ ಭಾಗವಹಿಸಿ ಸಂಸ್ಥೆಯಿಂದ ನೀಡಲಾದ ಸತ್ಕಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಮಾನ್ಯ ಜ್ಞಾನ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು’ ಎಂದರು.

ಕೆಎಲ್ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಚುನಮರಿ, ಆಡಳಿತಾಧಿಕಾರಿ ಪ್ರೊ.ಜಿ.ಎಂ. ಅಂದಾನಿ, ಪ್ರಾಚಾರ್ಯ ಎಂ.ಎ. ಪಾಟೀಲ, ಅಮೃತ ಜಕ್ಕಲಿ, ಎಂ.ಎನ್.ಕೌಜಲಗಿ, ಧಾರವಾಡದ ಜ್ಞಾನಕಾಶಿ ನಿರ್ದೇಶಕ ಮಹಿಪಾಲ ರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-937748683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.