ಹಾಸನ: ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಅಣಕು ಕೆಸಿಇಟಿ ಪರೀಕ್ಷೆ ಆಯೋಜಿಸಲಾಗಿತ್ತು.

ಅಣಕು ಪರೀಕ್ಷೆ ವಿದ್ಯಾರ್ಥಿ ಸ್ನೇಹಿಯಾಗಿದ್ದು, ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿ ಸಮೂಹವು ತಮ್ಮ ಪರೀಕ್ಷಾ ಸಾಮರ್ಥ್ಯವನ್ನು ಓರೆಗೆ ಹಚ್ಚಿ ನೋಡಿಕೊಳ್ಳುವ ಅವಕಾಶವಾಗಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಜೀವವಿಜ್ಞಾನ ಹಾಗೂ ಗಣಿತ ವಿಷಯಗಳಲ್ಲಿ ತಮಗಿರುವ ಪರಿಣತಿ, ದೌರ್ಬಲ್ಯ, ಸುಧಾರಿಸಬೇಕಾದ ಸಂಗತಿಗಳು, ಸಮಯ ಪರಿಪಾಲನೆ ಹಾಗೂ ಕೆಸಿಇಟಿ ಪರೀಕ್ಷಾ ಮಾದರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಈ ಅಣಕು ಪರೀಕ್ಷೆಯಲ್ಲಿ ಹಾಸನ ಹಾಗೂ ಸುತ್ತಲಿನ ಕಾಲೇಜುಗಳ ಸುಮಾರು 300 ಕ್ಕೂ ಹೆಚ್ಚು ಕೆಸಿಇಟಿ ಆಕಾಂಕ್ಷಿಗಳು ಭಾಗವಹಿಸಿದ್ದರು. ಈ ಅಣಕು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೋಂದಣಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಾರಿಗೆ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಈ ಪರೀಕ್ಷೆಯ ಮೇಲ್ವಿಚಾರಣೆ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪಿ.ಕೆ. ವಹಿಸಿದ್ದರು. ಡೀನ್ ಅಕಾಡೆಮಿಕ್ ಡಾ. ರಾಮಮೂರ್ತಿ ಡಿ., ಸಹಾಯಕ ಪ್ರಾಧ್ಯಾಪಕ ಡಾ. ಎಂ. ಸೋಮಶೇಖರ್, ಡಾ. ಧನಲಕ್ಷ್ಮಿ ಬಿ., ಎಲ್ಲ ವಿಭಾಗದ ಮುಖ್ಯಸ್ಥರು, ಬೋಧಕ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-36-803879188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.