ಹಾಸನ: ‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಉದ್ದೇಶದಿಂದ ನಗರದ ಪವರ್ ಇಂಡಿಯನ್ಸ್ ಅಕಾಡೆಮಿಯಿಂದ ಉಚಿತ ಎನ್ಡಿಎ ಕೋಚಿಂಗ್ ತರಗತಿಗಳನ್ನು ಆರಂಭಿಸಲಾಗುತ್ತಿದೆ’ ಎಂದು ಸಂಸ್ಥೆಯ ಮುಖ್ಯಸ್ಥ ರಮೇಶ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2021ರಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯು ಈಗಾಗಲೇ ಹಲವು ವಿದ್ಯಾರ್ಥಿಗಳಿಗೆ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಿದೆ. ನೂರಾರು ಮಂದಿ ಪರೀಕ್ಷೆಗಳಲ್ಲಿ ಯಶಸ್ಸು ಪಡೆದು ವಿವಿಧ ಇಲಾಖೆ ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ಎನ್ಡಿಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಪರೀಕ್ಷೆಯ ಜೊತೆಗೆ ಸೈನಿಕ್ ಶಾಲೆ, ಆರ್ಎಂಎಸ್, ಸಿಎಪಿಎಫ್, ಎಸ್ಎಸ್ಸಿ, ಬ್ಯಾಂಕಿಂಗ್, ಕರ್ನಾಟಕ ರಾಜ್ಯ ಪೊಲೀಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತರಬೇತಿ ನೀಡಲಾಗುತ್ತಿದೆ’ ಎಂದು ವಿವರಿಸಿದರು.

ಆಸಕ್ತರು ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಸಂಸ್ಥೆ ಯೋಜಿಸಿದೆ ಎಂದು ವಿವರಿಸಿದರು.

ಪಿಯುಸಿ ವಿದ್ಯಾರ್ಥಿಗಳು, ಪದವೀಧರರು ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಬೇಕು.

ಮಾಹಿತಿಗೆ ಮೊ.ಸಂ. 7676399929, 8861446918 ಸಂಪರ್ಕಿಸಬಹುದು ಎಂದರು. ದಕ್ಷಿಣಮೂರ್ತಿ, ಪ್ರಿಯಾ, ಸೌಮ್ಯ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-848626825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.