ಹಾವೇರಿ: ‘ನಗರದ ಹಾನಗಲ್ ರಸ್ತೆಯಲ್ಲಿರುವ ಭಗತ್ಸಿಂಗ್ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್ಸಿ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಕೇವಲ ₹5,000 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷರಾದ ಅಶ್ವಿನಿ ಸತೀಶ ಭಾಗಣ್ಣನವರ ತಿಳಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ‘ಪದವಿ ವ್ಯಾಸಂಗದ ಜೊತೆಯಲ್ಲಿ ಯುಪಿಎಸ್ಸಿ, ಕೆಪಿಎಸ್ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯೂ ಇರಲಿದೆ’ ಎಂದಿದ್ದಾರೆ. ‘ಆಸಕ್ತ ವಿದ್ಯಾರ್ಥಿಗಳು ಮೇ 30ರೊಳಗಾಗಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಬೇಕು. ತಂದೆ–ತಾಯಿ ಇಲ್ಲದ ಅನಾಥ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು. ಮಾಹಿತಿಗಾಗಿ ಕಾಲೇಜಿನ ಕಚೇರಿ ಅಥವಾ ಮೊಬೈಲ್– 8139997574, 6363539564 ಸಂಪರ್ಕಿಸಬಹುದು’ ಎಂದು ಅಶ್ವಿನಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-1742347296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.