ಹಿರೀಸಾವೆ: ‘ಪ್ರಥಮ ದರ್ಜೆ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಬಗ್ಗೆ ವಾರದಲ್ಲಿ ಎರಡು ದಿನ ವಿಶೇಷ ತರಗತಿಗಳನ್ನು ನಡೆಸುವುದರಿಂದ ಅನುಕೂಲವಾಗುತ್ತದೆ’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ವಲಯದ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ. ಡಿ.ಎಸ್. ಪ್ರತಿಮಾ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ಸ್ಕೌಟ್–ಗೈಡ್ಸ್, ರೆಡ್ ಕ್ರಾಸ್ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪದವಿ ನಂತರ ಮುಂದೆ ಏನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಉನ್ನತ ಶಿಕ್ಷಣದ ಮಾಹಿತಿ ನೀಡುವುದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನೂಕೂಲವಾಗುತ್ತದೆ’ ಎಂದರು.

ಶಾಸಕ ಸಿ.ಎನ್. ಬಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ಎನ್ಎಸ್ಎಸ್ ಮತ್ತಿತರ ಚಟುವಟಿಕೆಗಳ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಪ್ರತಿನಿತ್ಯ ಕಡ್ಡಾಯವಾಗಿ ದಿನಪತ್ರಿಕೆಗಳನ್ನು ಓದುಬೇಕು. ಇದರಿಂದ ನಿಮ್ಮ ಜ್ಞಾನ ಹೆಚ್ಚುತ್ತದೆ. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ’ ಎಂದರು.

ಪ್ರಾಂಶುಪಾಲ ಬಿ.ಎಚ್. ಲಕ್ಷ್ಮಣಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮರುಳಾರಾಧ್ಯ ಎನ್.ಆರ್, ನ್ಯಾಯಾಂಗ ಇಲಾಖೆಯ ಕೆ.ಎಂ. ಸೋಮಶೇಖರ್, ಬೆಳ್ಳೂರು ಎಎಲ್ಕೆ ಕಾಲೇಜಿನ ಉಪನ್ಯಾಸಕ ಕೆ. ಅನಂತ್, ವಿವಿಧ ಸಮಿತಿಗಳ ಸಂಚಾಲಕರಾದ ಪ್ರೊ. ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-1868117746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.