ಹೊಸದುರ್ಗ: ‘ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಜೊತೆಗೆ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಸ್ವಯಂ ಉದ್ಯೋಗದತ್ತ ಗಮನಹರಿಸಬೇಕು’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಪಾರ ಹಣ ವ್ಯಯಿಸಿ ಓದುವ ಬದಲು, ಸರ್ಕಾರಿ ಶಾಲೆ– ಕಾಲೇಜುಗಳಲ್ಲಿನ ಉತ್ತಮ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ನಿರುದ್ಯೋಗಿಗಳಾಗದೆ, ತಮ್ಮಲ್ಲಿರುವ ಜ್ಞಾನ ಹಾಗೂ ಕೌಶಲಗಳನ್ನು ಬಳಸಿಕೊಂಡು ಉತ್ತಮ ಬದುಕು ಕಂಡುಕೊಳ್ಳಬೇಕು’ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅಶ್ವಥ್ ಯಾದವ್ ಜಿ.ಎಸ್., ಐಕ್ಯೂಎಸಿ ಸಂಚಾಲಕ ಸತೀಶ್ ಎಂ.ಇ., ಸಾಂಸ್ಕೃತಿಕ ವೇದಿಕೆ ಸಂಚಾಲಕ ಜಯಪ್ರಕಾಶ್ ಆರ್., ಕ್ರೀಡಾ ಸಮಿತಿ ಸಂಚಾಲಕ ಶೈಲೇಂದ್ರ ಎಸ್.ವಿ., ಕಾರ್ಯಕ್ರಮಾಧಿಕಾರಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಎಚ್.ಕೆ., ಧನಂಜಯ ಕೆ.ಆರ್., ಸಂಚಾಲಕರಾದ ಮಂಜುನಾಥ್ ಎಸ್., ಶೋಭಾ ಕೆ.ಸಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆಗ್ರೋ ಶಿವಣ್ಣ, ಪಿ. ದೀಪಿಕಾ ಸತೀಶ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ, ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-44-1508619348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.