ಹುಬ್ಬಳ್ಳಿ: ‘ಉದ್ಯಮ ಹಾಗೂ ಕಂಪನಿ ಕ್ಷೇತ್ರಗಳು ಕೌಶಲ, ನಿರಂತರ ಶ್ರಮ, ಸಂವಹನ ನಿಪುಣತೆ ಹಾಗೂ ವೃತ್ತಿ ಬದ್ಧತೆಯನ್ನು ಹೆಚ್ಚು ಬಯಸುತ್ತವೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರು ಇವುಗಳನ್ನು ರೂಢಿಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮೇಘಾ ದೊಡ್ಡಗೌಡರ ಹೇಳಿದರು.

ನಗರದ ಕೆಎಲ್ಇ ಸಂಸ್ಥೆಯ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್.ಎಸ್.ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ನೀವು ಕಾರ್ಪೊರೇಟ್ ಆಗಲು ಸಿದ್ಧರಿದ್ದೀರಾ’ ವಿಷಯ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು. ಉದ್ಯಮ, ಕಂಪನಿ ಆರಂಭಿಸುವುದರಿಂದ ಹಲವು ಉದ್ಯೋಗಗಳನ್ನು ಸೃಷ್ಟಿಸಿ, ನಿರುದ್ಯೋಗಿಗಳ ಬದುಕಿಗೆ ಆಸರೆಯಾಗಬಹುದು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳ ವೃತ್ತಿ ಜೀವನ ರೂಪಿಸಲು ಇಂತಹ ಕಾರ್ಯಾಗಾರಗಳು ಹೆಚ್ಚು ಉಪಯುಕ್ತವಾಗುತ್ತವೆ’ ಎಂದು ತಿಳಿಸಿದರು.

ಪ್ರಾಚಾರ್ಯರಾದ ಸುಮಂಗಲಾ ಬಿ. ಪಾಟೀಲ ಮಾತನಾಡಿದರು. ಉಪನ್ಯಾಸಕಿ ಆರತಿ ಎಂ. ಪಟ್ಟಂದ, ತೇಜಸ್ವಿನಿ ಕಟ್ಟಿಮನಿ, ರಕ್ಷಿತಾ ಶಿರಕೋಳ, ದೇವದತ್ತ ವೈ., ಅಂಕಿತಾ ಅಗಸಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-24-123120901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.