ಹುಬ್ಬಳ್ಳಿ: ಶಿಕ್ಷಣ ಮತ್ತು ವೃತ್ತಿ ಮಾರ್ಗದರ್ಶನದ ಕುರಿತು ಸಮಗ್ರ ಮಾಹಿತಿ ನೀಡುವ ಮತ್ತು ವಿಪುಲ ಅವಕಾಶಗಳನ್ನು ಒದಗಿಸುವ ‘ಎಡ್ಯುವರ್ಸ್ ಮೇಳವು ಹುಬ್ಬಳ್ಳಿಯ ನೆಹರೂ ಕ್ರೀಡಾಂಗಣದಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆಯಲಿದೆ. ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗದಿಂದ ಆಯೋಜಿಸಿರುವ ಈ ಮೇಳಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದೆ. ಮೇಳಕ್ಕೆ ಭೇಟಿ ನೀಡಿದ್ದಲ್ಲಿ, ಶಿಕ್ಷಣ ಸೇರಿದಂತೆ ಪ್ರತಿಯೊಂದು ವಿಷಯದ ಕುರಿತು ಸಮಗ್ರ ಮಾಹಿತಿ ದೊರಯಲಿದೆ.

ಮೇಳವೂ ಎರಡೂ ದಿನ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಡೆಯಲಿದೆ. ದೇಶದ ವಿವಿಧ ರಾಜ್ಯಗಳ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಪ್ರಮುಖರು ಮತ್ತು ಪ್ರತಿನಿಧಿಗಳು ಮೇಳದಲ್ಲಿ ಭಾಗವಹಿಸುವರು. ಆಯಾ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳ ಮಳಿಗೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದಿನ ಶೈಕ್ಷಣಿಕ ಅವಕಾಶಗಳ ಬಗ್ಗೆ ಮಾಹಿತಿ ಪಡೆಯಬಹುದು. ಯಾವ ಕೋರ್ಸ್ ಮಾಡಿದರೆ ಒಳ್ಳೆಯದು, ಯಾವುದನ್ನು ಆಯ್ಕೆ ಮಾಡಿದರೆ ಸೂಕ್ತ ಎಂಬ ಬಗ್ಗೆ ಚರ್ಚಿಸಬಹುದು. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಶಿಕ್ಷಣ ತಜ್ಞರು ಮತ್ತು ಶಿಕ್ಷಣ ಸಂಸ್ಥೆಗಳ ಪ್ರಮುಖರೊಂದಿಗೆ ನೇರವಾಗಿ ಸಂವಾದಿಸಬಹುದು. ಗೊಂದಲಗಳನ್ನು ನಿವಾರಿಸಿಕೊಳ್ಳಬಹುದು. ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು.

ಪಿಯುಸಿ ಮುಗಿಸಿದ ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಸೂಕ್ತ? ಯಾವ ಪದವಿ ಪೂರ್ಣಗೊಳಿಸಿದರೆ, ಉದ್ಯೋಗಾವಕಾಶಗಳು ಹೆಚ್ಚಿವೆ? ಇಂಥ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದಾದರೆ, ಯಾವ ಶಿಕ್ಷಣ ಸಂಸ್ಥೆ ಮತ್ತು ವಿಶ್ವವಿದ್ಯಾಲಯದಲ್ಲಿ ಓದುವುದು ಒಳ್ಳೆಯದು ಎಂಬುದು ಸೇರಿದಂತೆ ಹಲವಾರು ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ಪಡೆಯಬಹುದು. ವಿದ್ಯಾರ್ಥಿಗಳ ಜೊತೆಗೆ ಪೋಷಕರು ಮತ್ತು ಕುಟುಂಬದ ಸದಸ್ಯರು ಪಾಲ್ಗೊಳ್ಳಬಹುದು.

ಪಾಲ್ಗೊಳ್ಳುವ ಸಂಸ್ಥೆಗಳು: ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ, ರೇವಾ ವಿಶ್ವವಿದ್ಯಾಲಯ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ದಯಾನಂದ ಸಾಗರ್ ವಿಶ್ವವಿದ್ಯಾಲಯ, ಸಿಎಂಆರ್ ವಿಶ್ವವಿದ್ಯಾಲಯ, ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)– ಬೆಂಗಳೂರು, ಶಿವ ನಾಡಾರ್ ವಿಶ್ವವಿದ್ಯಾಲಯ, ಚಾಣಕ್ಯ ವಿಶ್ವವಿದ್ಯಾಲಯ, ಎಸ್ಆರ್ಎಂ ವಿಶ್ವವಿದ್ಯಾಲಯ.

ಐಸಿಎಫ್ಎಐ ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್, ಸಿಐಟಿ– ಕೇಂಬ್ರಿಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಎಲ್ಇ ವೈದ್ಯಕೀಯ ವಿಶ್ವವಿದ್ಯಾಲಯ, ಕೆಎಲ್ಇ ತಾಂತ್ರಿಂಕ ವಿಶ್ವವಿದ್ಯಾಲಯ, ಗೀತಂ ಡೀಮ್ಡ್ ವಿಶ್ವವಿದ್ಯಾಲಯ, ಸಪ್ತಗಿರಿ ಎನ್ಪಿಎಸ್ ವಿಶ್ವವಿದ್ಯಾಲಯ, ವೆಲ್ಲೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಪರುಲ್ ವಿಶ್ವವಿದ್ಯಾಲಯ, ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್.ವಿ. ವಿಶ್ವವಿದ್ಯಾಲಯ, ಕಮ್ಮವರಿ ಸಂಘಮ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಸ್ಡಿಎಂ ಎಜುಕೇಶನ್ ಸೊಸೈಟಿ-ಉಜಿರೆ, ದಿ ಆಕ್ಸ್ಫರ್ಡ್ ಎಜುಕೇಶನ್ ಇನ್ಸ್ಟಿಟ್ಯೂಷನ್ಸ್, ಕೃಪಾನಿಧಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ಆರ್ ಸಂಸ್ಥೆಗಳು–ಬೆಂಗಳೂರು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬಿರ್ಲಾ ಗ್ಲೋಬಲ್ ವಿಶ್ವವಿದ್ಯಾಲಯ, ಸಂಭ್ರಮ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಂ.ಎಸ್. ಎಂಜಿನಿಯರಿಂಗ್ ಕಾಲೇಜು, ರಾಜರಾಜೇಶ್ವರಿ ಕಾಲೇಜು ಆಫ್ ಎಂಜಿನಿಯರಿಂಗ್, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್.

ಆಚಾರ್ಯ ಬೆಂಗಳೂರು ಬಿ-ಸ್ಕೂಲ್, ಕಲಬುರಗಿಯ ಖಾಜಾ ಬಂದೆನವಾಜ್ ವಿಶ್ವವಿದ್ಯಾಲಯ, ಎಸ್.ಇ.ಎ. ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಫಿಸಿಕ್ಸ್ವಾಲಾ, ವಿಷನ್ ಪಿ.ಯು.ಕಾಲೇಜು, ಏಟ್ರಿಯಾ ವಿಶ್ವವಿದ್ಯಾಲಯ, ವೈದೇಹಿ/ವ್ಯಮಕ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಸಾಯಿ ವಿದ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ–ಯಲಹಂಕ, ಅಮೃತ ವಿಶ್ವ ವಿದ್ಯಾಪೀಠಂ, ಎಸಿಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಎಐಎಂಎಸ್ ಇನ್ಸ್ಟಿಟ್ಯೂಟ್ಸ್, ಎಂಐಟಿ ವರ್ಲ್ಡ್ ಪೀಸ್ ವಿಶ್ವವಿದ್ಯಾಲಯ– ಪುಣೆ, ಅಮಿಟಿ ವಿಶ್ವವಿದ್ಯಾಲಯ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಚ್ಕೆಬಿಕೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಡೆಕ್ಕನ್ ಪಿಯು ಕಾಲೇಜು– ಬೆಂಗಳೂರು, ಪಿಇಎಸ್ ವಿಶ್ವವಿದ್ಯಾಲಯ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ– ಇರುವಕ್ಕಿ, ರಾಮಯ್ಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಎಸ್-ವ್ಯಾಸ ಸ್ಕೂಲ್ ಆಫ್ ಅಡ್ವಾನ್ಸ್ ಸ್ಟಡೀಸ್, ಶೇಷಾದ್ರಿಪುರಂ ಕಾಲೇಜು, ಐಎಎಸ್ ಬಾಬಾ, ವಂಡರ್ ಸ್ಪೇಸಸ್, ಸಂಜಯ್ ಗೋದಾವತ್ ವಿಶ್ವವಿದ್ಯಾಲಯ–ಕೊಲ್ಲಾಪುರ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಭಾರತೀಯ ಕಂಪನಿ ಕಾರ್ಯದರ್ಶಿಗಳ ಸಂಸ್ಥೆ (ಐಸಿಎಸ್ಐ), ಐಎಎಸ್ಬಿ ಆ್ಯಂಡ್ ಎಂ, ಎಸ್ಆರ್ಎನ್ ಆದರ್ಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಜನತಾ ಶಿಕ್ಷಣ ಸಂಘ, ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ಎಂಐಟಿಎಸ್ ಮದನಪಲ್ಲಿ ತಂತ್ರಜ್ಞಾನ ಮತ್ತು ವಿಜ್ಞಾನ ಸಂಸ್ಥೆ, ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು-ಮೈಸೂರು, ಕನಕಪುರ ಗ್ರಾಮೀಣ ಶಿಕ್ಷಣ ಸಂಘ (ಆರ್.) ಸಂಸ್ಥೆಗಳು ಸಹಿತ ಅನೇಕ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-26-1904500930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.