ಹುಣಸಗಿ: ಇಲ್ಲಿನ ಯುಕೆಪಿ ಕ್ಯಾಂಪಿನಲ್ಲಿರುವ ಶಿಕ್ಷಕರ ಕಲಿಕಾ ಕೇಂದ್ರದಲ್ಲಿ ಎಪಿಡಿ ಸಂಸ್ಥೆಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಾಗೂ ವಿಶೇಷ ಚೇತನ ಮಕ್ಕಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ರಮೇಶ ಮಾನೆ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಹಾಗೂ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು.

ಉನ್ನತ ಶಿಕ್ಷಣದ ಅವಕಾಶಗಳು, ವೃತ್ತಿಪರ ಕೋರ್ಸ್ಗಳು, ಕೌಶಲಾಭಿವೃದ್ಧಿ ತರಬೇತಿಗಳು, ಸರ್ಕಾರಿ ಯೋಜನೆಗಳು, ಸ್ವಯಂ ಉದ್ಯೋಗ ಮತ್ತು ಸ್ವಾವಲಂಬಿ ಜೀವನದ ಕುರಿತು ಮಾಹಿತಿ ನೀಡಿದರು. ಎಪಿಡಿ ಸಂಸ್ಥೆಯ ಹುಣಸಗಿ ತಾಲ್ಲೂಕು ಸಂಯೋಜಕ ಚನ್ನವೀರ ಅವರು ಸಂಸ್ಥೆಯ ಕಾರ್ಯಕ್ರಮಗಳ ಕುರಿತು ತಿಳಿಸಿದರು.

ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸಮುದಾಯ ಸಂಯೋಜಕ ಬಿ.ಬಿ.ಹಾಜಿರಾ, ರೇಣುಕಾ ಹಾಗೂ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-30-1936628330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.