ಹೂವಿನಹಡಗಲಿ : ‘ಪಟ್ಟಣದ ಎಸ್ಆರ್ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಸಾಧನಾ ಅಕಾಡೆಮಿ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ 6 ತಿಂಗಳ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದು ಶಾಸಕ ಎಲ್.ಕೃಷ್ಣನಾಯ್ಕ ತಿಳಿಸಿದರು.

ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದರ ಸಂಪೂರ್ಣ ವೆಚ್ಚವನ್ನು ನಾವು ಭರಿಸುತ್ತಿದ್ದೇವೆ. 800 ಜನರಿಗೆ ತರಬೇತಿ ನೀಡುವ ವ್ಯವಸ್ಥೆ ಇದ್ದು, ಹೆಚ್ಚು ಅರ್ಜಿ ಸಲ್ಲಿಕೆಯಾದಲ್ಲಿ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸ್ವೀಕಾರ ಹಾಗೂ ಮಾಹಿತಿಗಾಗಿ ಜಿಬಿಆರ್ ಕಾಲೇಜಿನಲ್ಲಿ ಸಹಾಯವಾಣಿ ತೆರೆಯಲಾಗುತ್ತಿದೆ’ ಎಂದರು.

ಸಾಧನಾ ಅಕಾಡೆಮಿಯ ಜ್ಯೋತಿ ಮಾತನಾಡಿ, ‘ಜೂನ್ 5ರವರೆಗೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 10 ರಂದು ತರಬೇತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟಿಸಲಾಗುತ್ತದೆ. ಸಂಸ್ಥೆಯ ನುರಿತ ತರಬೇತುದಾರರು ಐಎಎಸ್, ಐಪಿಎಸ್, ಎಫ್ಡಿಎ, ಎಸ್ಡಿಎ, ಪಿಡಿಒ, ಪೊಲೀಸ್ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಿದ್ದಾರೆ. ದ್ವಿತೀಯ ಪಿಯುಸಿ, ಪದವಿ ಪೂರೈಸಿದವರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ತರಬೇತಿ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು. ಈ ವೇಳೆ ಎ. ಕೊಟ್ರಗೌಡ, ಎಂ. ವಿಜಯಕುಮಾರ್, ಪ್ರಾಚಾರ್ಯರಾದ ಎಸ್.ಎಸ್. ಪಾಟೀಲ್, ಕೋರಿ ಹಾಲೇಶ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-25-101550394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.