ಕಲಬುರಗಿ: ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಂಯೋಗದೊಂದಿಗೆ ಕಲಬುರಗಿ ನಗರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಸ್ಥಾಪಿಸಲಾಗಿರುವ ‘ಪ್ರಬುದ್ಧ ಅಕಾಡೆಮಿ’ ವತಿಯಿಂದ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ಉಚಿತ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮವು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು, ಯಾವುದೇ ಪದವಿ ಹೊಂದಿರುವ ಅಥವಾ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 21ರಿಂದ 37 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಯಿಂದ 10 ತಿಂಗಳುಗಳ ಕಾಲ ಉಚಿತ ಮತ್ತು ಗುಣಮಟ್ಟದ ತರಬೇತಿಯನ್ನು ನೀಡಲಾಗುತ್ತದೆ. ಈ ತರಬೇತಿಯು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡಂತೆ ಮೂರೂ ಹಂತಗಳಿಗೆ ಸಂಪೂರ್ಣ ಮಾರ್ಗದರ್ಶನವನ್ನು ನೀಡಲು ಉದ್ದೇಶಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಸಂಪೂರ್ಣ ಅರ್ಹತೆ ಮತ್ತು ಪಾರದರ್ಶಕತೆಯ ಆಧಾರದ ಮೇಲೆ 500 ವಿದ್ಯಾರ್ಥಿಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ kalaburagi.nic.inಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-34-485197240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.