ಕಲಬುರಗಿ: ನಗರದ ಕೆ.ಸಿ.ಟಿ ಫಾರ್ಮಸಿ ಕಾಲೇಜಿನಲ್ಲಿ ಹಜರತ್ ಶೇಖ್ ಮಿನ್ಹಾಜುದ್ದೀನ್ ಕುಲ್ಲಿ ರವಾನ್ ಚಾರಿಟಬಲ್ ಟ್ರಸ್ಟ್ ಮತ್ತು ಖಮರುಲ್ ಇಸ್ಲಾಂ ಫೌಂಡೇಶನ್ ಸಹಯೋಗದೊಂದಿಗೆ ಪ್ರತಿಭಾವಂತ ನಾಲ್ಕು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಯೂನೂಸ್ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ವರ್ಷ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮೇ 21ರೊಳಗೆ kctpharmacy.edu.in ಅರ್ಜಿ ಸಲ್ಲಿಸಬಹುದು. ಡಿ.ಫಾರ್ಮಾ (2 ವರ್ಷದ ಡಿಪ್ಲೊಮಾ) ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಗೆ ಹಾಗೂ ಬಿ.ಫಾರ್ಮಾ (4 ವರ್ಷದ ಪದವಿ) ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಗೆ ಸಂಪೂರ್ಣ ಉಚಿತ ಪ್ರವೇಶ ನೀಡಲಾಗುವುದು’ ಎಂದರು.

‘ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಪರೀಕ್ಷಾ ಶುಲ್ಕ ಮಾತ್ರ ಪಾವತಿಸ ಬೇಕಾಗುತ್ತದೆ. ಪಿಯುಸಿ (ಪಿಸಿಎಂಬಿ) ವಿಷಯಗಳಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಪ್ರವೇಶ ನೀಡಲಾಗುವುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಪ್ರತಿ ಮತ್ತು ಅಗತ್ಯ ದಾಖಲೆಗಳನ್ನು ಕಾಲೇಜಿನಲ್ಲಿ ಸಲ್ಲಿಸಬೇಕು’ ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕನಸು ನನಸಾಗಿಸಿಕೊಳ್ಳಲು ಮತ್ತು ಫಾರ್ಮಸಿ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಫೌಂಡೇಶನ್ ಅಧ್ಯಕ್ಷ ಫರಾಜ್ ಉಲ್ ಇಸ್ಲಾಂ ತಿಳಿಸಿದ್ದಾರೆ ಎಂದರು.

ಉಪ ಪ್ರಾಂಶುಪಾಲ ಅನಂತರಾವ ಕುಲಕರ್ಣಿ, ಸಿದ್ದಿಕಿ ಶಕೀಲ್ ಅಹ್ಮದ್, ಅಂಬರೀಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-34-1596895451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.