ಅಳವಂಡಿ: ‘ಪ್ರಜಾವಾಣಿ ಪತ್ರಿಕೆಯ ನಿರಂತರ ಓದುವಿಕೆ, ವಿಶೇಷವಾಗಿ ಸಂಪಾಕೀಯ ಪುಟ, ಪ್ರಚಲಿತ ವಿದ್ಯಮಾನಗಳ ಆಳವಾದ ಜ್ಞಾನಕ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಹಕಾರಿಯಾಗಿದೆ’ ಎಂದು ಕೊಪ್ಪಳ ನಗರ ಠಾಣೆಯ ಪಿಎಸ್ಐ ರೇವಣ್ಣ ಗುರಿಕಾರ ಹೇಳಿದರು.

ಗ್ರಾಮದ ಅಳವಂಡಿ ಶಿವಮೂರ್ತಿ ಸ್ವಾಮಿ ಇನಾಮದಾರ ಕಟ್ಟಿಮನಿ ಹಿರೇಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಪ್ರಜಾವಾಣಿ’ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಉದ್ಯೋಗ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ಪರ್ಧಾತ್ಮಕ ಪರೀಕ್ಷೆಗಳು ನಮ್ಮ ಬದುಕನ್ನು ಬದಲಿಸುತ್ತವೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ನಿಗದಿತ ವಿಷಯಗಳ ಜೊತೆಗೆ ನಿಯಮಿತವಾಗಿ ದಿನ ಪತ್ರಿಕೆಗಳನ್ನು ಓದಬೇಕು. ಸರ್ಕಾರಿ ಹುದ್ದೆಯು ಬಡತನ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಕೇವಲ ಸಂಬಳ ಮಾತ್ರವಲ್ಲದೆ, ಸ್ಥಿರತೆ, ಸಾಮಾಜಿಕ ಭದ್ರತೆ ಮತ್ತು ನಮ್ಮ ಗೌರವದ ಜೊತೆ ತಂದೆ - ತಾಯಿ, ಗ್ರಾಮದ ಗೌರವ ಹೆಚ್ಚಿಸುತ್ತದೆ.ಸರ್ಕಾರಿ ಹುದ್ದೆ ಪಡೆಯಲು ಅಭ್ಯರ್ಥಿಗಳು ಕಠಿಣ ಪರಿಶ್ರಮ, ಅಧ್ಯಯನ, ನಿರಂತರತೆ, ನಿಷ್ಠೆ, ಏಕಾಗ್ರತೆ ಅತ್ಯಗತ್ಯವಾಗಿದೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು, ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಬೇಕು’ ಎಂದರು.

ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಂಬಳಿ ಮಾತನಾಡಿ, ಓದುವಾಗ ಯಾವಾಗಲೂ ಒಬ್ಬ ವ್ಯಕ್ತಿಯನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ಆಗ ಓದಲು ಆಸಕ್ತಿ ಹೆಚ್ಚಾಗುತ್ತದೆ. ನಿತ್ಯ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದರು.

ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ, ಪ್ರಜಾವಾಣಿಯ ಪ್ರಸರಣಾ ವಿಭಾಗದ ಜಿಲ್ಲಾ ಮುಖ್ಯಸ್ಥ ವೀರೇಶ ಸಿಳ್ಳಿನ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ನಾಗರಾಜ್ ಹಾವಿನಾಳ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಪ್ರಾಧ್ಯಾಪಕರಾದ ಶಂಕ್ರಪ್ಪ, ಮಹೇಶಕುಮಾರ, ಪ್ರವೀಣ ಕುಮಾರ, ರೇಷ್ಮಾ, ಹಂಪಾದೇವಿ, ಸಾಲಿಯಾಬೇಗಂ, ಸಾಹಿತಿ ಬಿ.ಎನ್.ಹೊರಪೇಟಿ, ಅಳವಂಡಿ ವಲಯದ ‘ಪ್ರಜಾವಾಣಿ’ ಅರೆಕಾಲಿಕ ವರದಿಗಾರ ಜುನಸಾಬ ವಡ್ಡಟ್ಟಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ,ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-35-1193399516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.