ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಐಎಂಸಿ ಕೋಟಾದಡಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್ಸಿವಿಟಿ ಸಂಯೋಜನೆ ಹೊಂದಿರುವ 2 ವರ್ಷಗಳ ಅವಧಿಯ ಎಲೆಕ್ಟ್ರಿಷಿಯನ್ ಹಾಗೂ ಫಿಟ್ಟರ್ ವೃತ್ತಿಗಳಲ್ಲಿ ತಲಾ 4 ಸ್ಥಾನಗಳು ಲಭ್ಯವಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪ್ರಕ್ರಿಯೆಯನ್ನು ಜೂನ್ 4ರಂದು ನಡೆಸಲಾಗುತ್ತಿದ್ದು, ‘ಮೊದಲು ಬಂದವರಿಗೆ ಮೊದಲ ಆದ್ಯತೆ’ ಎಂಬ ನಿಯಮದ ಮೇರೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಪ್ರವೇಶ ಹಾಗೂ ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಸಂಸ್ಥೆಯ ತರಬೇತಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-35-946089690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.