ಕುಶಾಲನಗರ: ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ–ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲ ರಾಮಚಂದ್ರ ರಾಜೇ ಅರಸ್ ಹೇಳಿದರು.

ಸಮೀಪದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.‘ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ಮೂಲಕ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು’ ಎಂದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ‘ಡಯಟ್ ಸಂಸ್ಥೆಯಲ್ಲಿ ಆರಂಭವಾಗುತ್ತಿರುವ ವೃತ್ತಿ ಮಾರ್ಗದರ್ಶನ ಘಟಕವು ಜಿಲ್ಲೆಯ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸ್ಗಳು ಮತ್ತು ವೃತ್ತಿ ಆಯ್ಕೆಗೆ ಪೂರಕವಾಗಿದೆ’ ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಆರೋಗ್ಯ ಇಲಾಖೆಯ ವತಿಯಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ ಎಂದರು. ವೃತ್ತಿಪರ ಘಟಕ ಸಮಿತಿ ಕಾರ್ಯದರ್ಶಿ ಎಚ್.ಎಚ್.ಸತೀಶ್, ಘಟಕದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪೂರ್ಣ, ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ, ಬಿ.ಆರ್.ಸಿ. ಎಂ.ವಿ.ಮಂಜೇಶ್, ಸಂಸ್ಥೆಯ ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಪಿ.ಪಿ.ಗಾಯತ್ರಿ, ಸಿ.ಆರ್.ಪಿ.ಗಳಾದ ಕೆ.ಶಾಂತಕುಮಾರ್, ಟಿ.ಈ.ವಿಶ್ವನಾಥ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಎಸ್. ಮಹೇಂದ್ರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-51-1932200110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.