ಮಂಡ್ಯ: ಸ್ಪರ್ಧಾತ್ಮಕ ಯುಗದಲ್ಲಿ, ಸರಿಯಾದ ಮಾಹಿತಿ ಹಾಗೂ ಮಾರ್ಗದರ್ಶನವು ಯುವಜನತೆಯ ಯಶಸ್ಸಿನ ಮೂಲಸ್ತಂಭವಾಗಿದ್ದು, ಇದು ವಿದ್ಯಾರ್ಥಿಗಳಿಗೂ ಸಹಾಯಕವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಹೇಳಿದರು.

ನರಗದ ಸಂತಜೋಸೆಫೆರ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯ ಯೋಜನಾ ನಿರ್ದೇಶಕರ ಕಚೇರಿ (ಬೆಂಗಳೂರು), ಜಿಲ್ಲಾ ವೃತ್ತಿಪರ ಮತ್ತು ವೃತಿ ಮಾರ್ಗದರ್ಶನ ಘಟಕದ ಸಹಯೋಗದಲ್ಲಿ ಶುಕ್ರವಾರ ನಡೆದ ವೃತ್ತಿ ಮಾರ್ಗದರ್ಶನ ಶಿಬಿರ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ಬಾರಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಸರಿಯಾದ ತಿಳವಳಿಕೆ ಇಲ್ಲದ ಕಾರಣ ಸೂಕ್ತ ವೃತ್ತಿ ಆಯ್ಕೆ ಮಾಡಲು ಸಂಕಷ್ಟ ಅನುಭವಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಈ ರೀತಿಯ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗುತ್ತವೆ ಎಂದು ಸಲಹೆ ನೀಡಿದರು.

ಎಸ್ಎಸ್ಎಲ್ಸಿ, ಪಿಯುಸಿ ನಂತರದ ಕೋರ್ಸ್ಗಳ ಆಯ್ಕೆ, ವೃತ್ತಿಪರ ಕೋರ್ಸ್ಗಳು, ಕೌಶಲಾಭಿವೃದ್ಧಿ ತರಬೇತಿ, ತಾಂತ್ರಿಕ ಶಿಕ್ಷಣದ ಅವಕಾಶ, ಅಂಗವಿಕಲ ಮಕ್ಕಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರಿ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ದೊರಕುವ ಸೌಲಭ್ಯಗಳ ಬಗ್ಗೆ ಪ್ರದರ್ಶನ ಮಳಿಗೆಗಳ ಮೂಲಕ ಇಲಾಖೆವಾರು ಮಾಹಿತಿ ನೀಡಲಾಯಿತು.

ಮೈಸೂರು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಜಂಟಿ ನಿರ್ದೇಶಕಿ ರಾಜಲಕ್ಷ್ಮೀ, ಶಾಲಾ ಶಿಕ್ಷಣ ಮಹಾವಿದ್ಯಾಲಯದ ಉಪನಿರ್ದೇಶಕ (ಆಡಳಿತ) ಜಿ.ಎ.ಲೋಕೇಶ್, ಬಿಇಒಗಳಾದ ಸೌಭಾಗ್ಯ, ಮಹದೇವ, ಡಯಟ್ ಉಪನಿರ್ದೇಶಕ ಕೆ.ಯೋಗೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-40-1163637100

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.