ಮಂಗಳೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿಎಚ್ಟಿಟಿ) ಕೋರ್ಸ್ಗೆ 2026-27ನೇ ಸಾಲಿನಲ್ಲಿ 39 ಪುರುಷ ಮತ್ತು ಮಹಿಳೆಯರ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಗೆ ತಿಂಗಳಲ್ಲಿ ₹ 2,500ರಂತೆ ಶಿಷ್ಯವೇತನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಗದಗ–ಬಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 22 ಅಭ್ಯರ್ಥಿಗಳಿಗೆ, ತಮಿಳುನಾಡಿನ ಸೇಲಂನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 12, ಆಂಧ್ರಪ್ರದೇಶದ ನೆಲ್ಲೂರು ವೆಂಕಟಗಿರಿಯ ಎಸ್ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 3, ಕೇರಳದ ಕಣ್ಣೂರಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಇಬ್ಬರಿಗೆ ಅವಕಾಶವಿದೆ.

ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ವಿಷಯವಾಗಿ ಕಲಿತು ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. 2026ರ ಜು.1ಕ್ಕೆ ಅನ್ವಯವಾಗುವಂತೆ ಸಾಮಾನ್ಯ ವರ್ಗದವರು 15ರಿಂದ 23ರ ವಯೋಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15ರಿಂದ 25ರ ವಯೋಮಿತಿಯಲ್ಲಿರಬೇಕು.

ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳ ಜೊತೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇಲ್ಲಿಗೆ ಸಲ್ಲಿಸಲು ಕೊನೆಯ ದಿನ ಮೇ 30 ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ 08372– 259664 ಅಥವಾ 9916143619 ಇಲ್ಲವೇ ದ.ಕ. ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರನ್ನು (9945035589/ 9449145293) ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-690934623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.