ಮೈಸೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಹಾಗೂ ಮೈಸೂರು ಕಾಲೇಜ್ ಅಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (ಮೈಸೆಮ್) ಸಹಯೋಗದಲ್ಲಿ ‘ಸಿಇಟಿ ಮಾರ್ಗದರ್ಶನ ಮತ್ತು ಕೆರಿಯರ್ ಗೈಡೆನ್ಸ್ ಕಾರ್ಯಕ್ರಮ’ವನ್ನು ಮೇ 25ರಂದು (ಸೋಮವಾರ) ಬೆಳಿಗ್ಗೆ 10ಕ್ಕೆ ಚಿಕ್ಕಹಳ್ಳಿ ಸಮೀಪದ ತಿ.ನರಸೀಪುರ ರಸ್ತೆಯಲ್ಲಿರುವ ದೊಡ್ಡ ಆಲದಮರ ಬಳಿ ಮೈಸೆಮ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಎಂಜಿನಿಯರಿಂಗ್ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು. ಸಿಇಟಿ ನಂತರ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಸೀಟು ಆಯ್ಕೆ ಹೇಗೆ ಮಾಡಿಕೊಳ್ಳಬೇಕು, ಯಾವ ಕೋರ್ಸ್ಗಳಿಗೆ ಬೇಡಿಕೆ ಇದೆ, ಕಾಲೇಜು ಪ್ರವೇಶ ಪ್ರಕ್ರಿಯೆ ಹೇಗಿರುತ್ತದೆ ಎಂಬಿತ್ಯಾದಿ ಮಾಹಿತಿಗಳನ್ನು ಕಾರ್ಯಕ್ರಮದಲ್ಲಿ ತಜ್ಞರು ನೀಡಲಿದ್ದಾರೆ. ಪೋಷಕರಿಗೂ ಮಾರ್ಗದರ್ಶನ ನೀಡಲಾಗುವುದು.

ಸಿಇಟಿ ನಂತರ ಮುಂದೇನು ಮಾಡಬೇಕು, ಸೀಟ್ ಮ್ಯಾಟ್ರಿಕ್ಸ್, ಯಾವೆಲ್ಲ ವಿಧಾನಗಳನ್ನು ಅನುಸರಿಸಬೇಕು? ಪ್ರವೇಶ ಪಡೆದುಕೊಳ್ಳಲು ಏನು ಮಾಡಬೇಕು? ಪ್ರವೇಶ ಪ್ರಕ್ರಿಯೆ ಹೇಗಿರುತ್ತದೆ? ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ? ಯಾವೆಲ್ಲ ನಿಯಮಗಳನ್ನು ಪಾಲಿಸಬೇಕಾಗುತ್ತದೆ? ಯಾವ ಕಾಲೇಜು ಆಯ್ಕೆ ಮಾಡಿಕೊಳ್ಳಬೇಕು?... ಇಂತಹ ಹತ್ತಾರು ಪ್ರಶ್ನೆಗಳಿಗೆ, ಹಲವು ಗೊಂದಲಗಳಿಗೆ ತಜ್ಞರು ಉತ್ತರಿಸಿ, ಮಾರ್ಗದರ್ಶನ ಮಾಡಲಿದ್ದಾರೆ.

‘ಜ್ಞಾನವಾಹಿನಿ’ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಿವಪ್ಪ, ಟ್ರಸ್ಟಿ ಕೆ.ಎನ್. ಪುಟ್ಟಬುದ್ದಿ, ಮೈಸೆಮ್ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಮಂಜುನಾಥ್ ಪಾಲ್ಗೊಳ್ಳುವರು. ಮಹಾರಾಜ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹಾಗೂ ಸಿಇಟಿ ಪರಿಣತ ಉದಯಶಂಕರ್ ಹಾಗೂ ಆರ್.ರಕ್ಷಿತಾ ಅವರು ಸಿಇಟಿ, ಕಾಮೆಡ್–ಕೆ ಬಗ್ಗೆ ಮಾಹಿತಿ ನೀಡುವರು. ಟಿಪಿಎಂಎಲ್ ಪ್ರಸರಣ ವಿಭಾಗದ ಪ್ರಧಾನ ವ್ಯವಸ್ಥಾಪಕ ಬಿ.ಎ. ರವಿ, ಉಪಪ್ರಧಾನ ವ್ಯವಸ್ಥಾಪಕ ಜಗನ್ನಾಥ ಜೋಯಿಸ್, ‘ಪ್ರಜಾವಾಣಿ’ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ, ‘ಡೆಕ್ಕನ್ ಹೆರಾಲ್ಡ್’ ಮೈಸೂರು ಬ್ಯೂರೋ ಮುಖ್ಯಸ್ಥ ಟಿ.ಆರ್. ಸತೀಶ್ಕುಮಾರ್ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-39-1225624074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.