ಮೈಸೂರು: ‘ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯು ಅನೇಕ ಜೀವನ ಪಾಠ ಹೇಳಿಕೊಡುತ್ತದೆ’ ಎಂದು ಎಂ.ಕಾಂ ವಿಭಾಗದ ಮುಖ್ಯಸ್ಥ ಎಚ್.ಎಸ್.ನಿರಂಜನ ಬಾಬು ಹೇಳಿದರು.

ಇಲ್ಲಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಐಕ್ಯೂಎಸಿ ಮತ್ತು ಎಂಕಾಂ ಸ್ನಾತಕೋತ್ತರ ವಿಭಾಗದ ಸಹಯೋಗದಲ್ಲಿ ‘ಸರ್ಕಾರಿ ಕ್ಷೇತ್ರದಲ್ಲಿನ ವೃತ್ತಿ ಅವಕಾಶ: ಸ್ಪರ್ಧಾರ್ಥಿಗಳಿಗೆ ಮಾರ್ಗಸೂಚಿ’ ಕುರಿತು ಗುರುವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

‘ಪದವೀಧರ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ ತಿಳಿದುಕೊಳ್ಳಬೇಕು. ಸರ್ಕಾರಿ ಉದ್ಯೋಗಗಳು ಸ್ಥಿರತೆ, ಭದ್ರತೆ ಹಾಗೂ ಸಮಾಜ ಸೇವೆಯ ಅವಕಾಶಗಳನ್ನು ಒದಗಿಸುವುದರೊಂದಿಗೆ ವಿದ್ಯಾರ್ಥಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಹಂತಗಳಲ್ಲಿ ಅಧಿಕಾರಿಗಳಾಗಿ ಹಾಗೂ ನಿರ್ವಹಣಾ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ ನೀಡುತ್ತದೆ’ ಎಂದು ಹೇಳಿದರು.

‘ವಿದ್ಯಾರ್ಥಿಗಳು ವಿಶ್ಲೇಷಣಾತ್ಮಕ ಚಿಂತನೆ, ಶಿಸ್ತು ಮತ್ತು ಕಠಿಣ ಪರಿಶ್ರಮದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕು’ ಎಂದರು.

ನೇತಾಜಿ ಫೌಂಡೇಷನ್ನ ಎಂ. ರಘು ಮತ್ತು ಯು.ಎಂ. ಶರತ್ ರಾವ್, ಕಾಲೇಜಿನ ಪ್ರಾಂಶುಪಾಲ ಸಿ. ನಟರಾಜ್, ಐಕ್ಯೂಎಸಿ ಸಂಯೋಜಕ ಎಸ್. ಮುತ್ತುರಾಜ, ಸಹಾಯಕ ಪ್ರಾಧ್ಯಾಪಕಿ ಶ್ರುತಿ, ಪ್ರೀತಂ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-39-1539002809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.