ಮೈಸೂರು: ಕಾಲೇಜು ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದು ಅವಶ್ಯಕ ಎಂದು ಕಾಲೇಜಿನ ನಿರ್ದೇಶಕ ಹರೀಶ್ ಪಿ. ಹೇಳಿದರು.

ಇಲ್ಲಿನ ದಕ್ಷ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಬಿಎ ವಿಭಾಗದಿಂದ ‘ಕಾಲೇಜ್ ಟು ಕಾರ್ಪೊರೇಟ್–ಸ್ಕಿಲ್ಸ್ ದಟ್ ಮೇಕ್ ಯು ಎಂಬಿಎ ರೆಡಿ’ ವಿಷಯ ಕುರಿತು ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಕೇವಲ ತಂತ್ರಜ್ಞಾನಕ್ಕೆ ಸೀಮಿತವಾಗದೇ ಪ್ರಾಯೋಗಿಕ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪೂಜಾ ಜೋಶಿ ಮಾತನಾಡಿ, ‘ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಇಂತಹ ಕಾರ್ಯಾಗಾರಗಳು ಅವಶ್ಯಕ’ ಎಂದರು.

ಕಾಲೇಜಿನ ಕಾರ್ಪೊರೇಟ್ ಸಲಹಾ ಮಂಡಳಿಯ ಅಧ್ಯಕ್ಷ ಸಂಜಯ್ ವಿರ್ನಾವೆ ಎಂ.ಬಿ.ಎ. ನಂತರದ ಉದ್ಯೋಗಾವಕಾಶಗಳು ವಿಷಯ ಕುರಿತು ಮಾತನಾಡಿದರು. ಅರ್ಪಿತಾ ಎಚ್.ಆರ್., ಜಯಂತ್, ಸುಮಂತ್, ಗೋಕುಲ್ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-1652527873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.