ಮೈಸೂರು: ‘ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮೇ 10ರಂದು ಓಪನ್ ಡೇ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರಾಚಾರ್ಯ ಸದಾಶಿವೇಗೌಡ ತಿಳಿಸಿದರು.

‘ಈ ಬಾರಿ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆದಿದ್ದಾರೆ. ಆದರೆ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕೆಂಬ ಗೊಂದಲದಲ್ಲಿದ್ದಾರೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಸಂವಾದ, ಉದ್ಯಮ ಕ್ಷೇತ್ರದ ಒಳನೋಟ, ತಾಂತ್ರಿಕ ಪ್ರದರ್ಶನ ಇರಲಿವೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಮೇ 8ರಿಂದ 10ರವರೆಗೆ ಕಾಲೇಜು ಕ್ಯಾಂಪಸ್ನಲ್ಲಿ ವಿದ್ಯುತ್ ಶೀರ್ಷಿಕೆಯ ಸಾಂಸ್ಕೃತಿಕ ಉತ್ಸವ ಹಾಗೂ ವಿದ್ಯುತ್ ಉತ್ಸವದಲ್ಲಿ ಸಾಂಸ್ಕೃತಿಕ, ಕಲಾತ್ಮಕ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿವೆ. ವಿವಿಧ ಕಾಲೇಜುಗಳು ಮತ್ತು ವಿವಿಗಳ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಗೆ ತರುವ ಯತ್ನ ಇದಾಗಿದೆ. ಡಾಗ್ ಶೋ, ಆಟೊ ಎಕ್ಸ್ಪೊ, ರಂಗೋಲಿ, ಗೋಲ್ಡನ್ ಮೈಕ್, ಮೆಹೆಂದಿ ಸೇರಿದಂತೆ ವಿವಿಧ ಸ್ಪರ್ಧೆಗಳು ಇರಲಿವೆ’ ಎಂದರು.

ನವೀನ್ಪ್ರಕಾಶ್, ಗೌರಿಶಂಕರ್, ಮಂಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-39-1106443917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.