ನರಸಿಂಹರಾಜಪುರ: ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಜವಾಹರ ನವೋದಯ ವಿದ್ಯಾಸಂಸ್ಥೆಯ ನಿವೃತ್ತ ಸಹಾಯಕ ಆಯುಕ್ತ ರಾಮಚಂದ್ರ ಅಡ್ಡಮನೆ ಹೇಳಿದರು.

ಪಟ್ಟಣದ ಎಂಕೆಸಿಪಿಎಂ (ಶಾರದಾ ವಿದ್ಯಾಮಂದಿರ) ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಕೋರ್ಸ್ಗಳ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪದವಿ ಪೂರ್ವ ಹಂತದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಎರಡು ವರ್ಷ ಕಠಿಣ ಪರಿಶ್ರಮದಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಸಮಯದ ಸದುಪಯೋಗ, ಆರೋಗ್ಯದ ಬಗ್ಗೆ ಕಾಳಜಿ, ಮಾನಸಿಕ ನಿಯಂತ್ರಣ ಜತೆಗೆ ಕಲಿಯುವ ತಂತ್ರವನ್ನು ಮೈಗೂಡಿಸಿಕೊಂಡಾಗ ಯಶಸ್ಸು ಸಾಧ್ಯವಾಗುತ್ತದೆ ಎಂದರು.

ಕಲಿಕೆಯ ಮೂಲ ಉದ್ದೇಶವನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಓದು. ಈ ಹಂತದಲ್ಲಿ ಉಪನ್ಯಾಸಕರೊಂದಿಗೆ ಕೂಡಿ ಕಲಿತಾಗ ವಿದ್ಯೆ ಮಹತ್ವವನ್ನು ಪಡೆದುಕೊಳ್ಳುತ್ತದೆ. ಮುಂದಿನ ಹಂತದ ಜ್ಞಾನಾರ್ಜನೆಗೆ ಬೇಕಾದ ಎಲ್ಲ ತಳಹದಿಗಳು ಇಲ್ಲಿ ಲಭ್ಯವಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದರು.

ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಬೆಮ್ಮನೆ ದಯಾನಂದ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಕೃತಜ್ಞತಾ ಭಾವನೆ ಬೆಳೆಸಿಕೊಳ್ಳ ಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಎಂ.ಕೆ.ಸಿ.ಪಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೂರ್ಣ ಫಲಿತಾಂಶ ಪಡೆಯುತ್ತಿರುವುದು ಶ್ಲಾಘನೀಯ ಎಂದರು.

ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್, ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ, ಶೈಕ್ಷಣಿಕ ಸಂಯೋಜಕಿ ತೃಪ್ತಿ ಅಮರ್, ಪ್ರಾಂಶುಪಾಲೆ ಪದ್ಮ ರಮೇಶ್, ವಿದ್ಯಾರ್ಥಿಗಳಾದ ಲಕ್ಷ್ಮೀ, ಜಿಷಾ, ತೇಜಸ್ವಿನಿ, ಶಾಲ್ವಾ ಫಾತಿಮಾ, ಧೃತಿ ಭಾಗವಹಿಸಿದ್ದರು.

ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ದೀಕ್ಷಾ (588), ಬ್ರೇಟ್ಟಾ (580), ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ಕೃಪಾನಿ (592), ಅಕ್ಷತಾ ಸೇನ್ (590) ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-1068856035

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.