ನಿಪ್ಪಾಣಿ: ‘ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿ ಹೊಂದಿ, ನಿಯಮಿತ ಅಧ್ಯಯನದೊಂದಿಗೆ ಶ್ರಮಪಡುವುದು ಅತ್ಯಂತ ಅಗತ್ಯ. ಯಶಸ್ಸು ಒಂದು ದಿನದಲ್ಲಿ ಸಿಗುವುದಿಲ್ಲ. ಅದಕ್ಕಾಗಿ ನಿರಂತರ ಪರಿಶ್ರಮ, ಸಮಯಪಾಲನೆ ಮತ್ತು ಧೈರ್ಯ ಅಗತ್ಯ’ ಎಂದು 2025ರಲ್ಲಿ ನಡೆದ ಭಾರತದ ಅತ್ಯುನ್ನತ ನಾಗರಿಕ ಸೇವಾ (ಯುಪಿಎಸ್ಸಿ) ಪರೀಕ್ಷೆಯಲ್ಲಿ 53ನೇ ರ್ಯಾಂಕ್ ಪಡೆದ ಕಿರಣ ಕಮತೆ ಹೇಳಿದರು.

ಸ್ಥಳೀಯ ಕೆ.ಎಲ್.ಇ ಸಂಸ್ಥೆಯ ಜಿ.ಐ. ಬಾಗೇವಾಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅದರಲ್ಲಿ ಆಳವಾದ ಅಧ್ಯಯನ ಮಾಡಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕ ಪ್ರವೀಣ ಬಾಗೇವಾಡಿ ವಹಿಸಿದ್ದರು. ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಮಹೇಶ ಬಾಗೇವಾಡಿ, ಸದಸ್ಯ ಎಂ.ಆರ್. ಪಾಟೀಲ, ಪ್ರಾಚಾರ್ಯ ಎಂ.ಎಂ. ಹುರಳಿ, ಕೆ.ಎಲ್.ಇ ಅಂಗ ಸಂಸ್ಥೆಗಳ ಪ್ರಾಚಾರ್ಯರು, ನಿವೃತ್ತ ಪ್ರಾಧ್ಯಾಪಕರಾದ ಬಿ.ಎಸ್. ಕಾಂಬಳೆ, ಆರ್.ಜಿ. ಖರಾಬೆ, ವಿಜಯ ಧಾರವಾಡ, ಮಹಾವಿದ್ಯಾಲಯದ ಪ್ರಾಧ್ಯಾಪಕ ಎಸ್.ಎಂ.ಚರಾಯಮಾನೆ, ಅತುಲಕುಮಾರ ಕಾಂಬಳೆ, ಅಶೋಕ ರಾಠೋಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-21-403205631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.