ಅರಸೀಕೆರೆ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿನಿ ಜ್ಯೂಡಿತ್ ಜೆಸ್ಸಿಕಾ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ 98.33 ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.

ವಿಶೇಷವೆಂದರೆ ಈ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ₹710 ಹಾಗೂ ದ್ವಿತೀಯ ಪಿಯುಸಿಗೆ ₹800 ಮಾತ್ರ ಶುಲ್ಕ ಭರಿಸಲಾಗಿದೆ.

ಕನ್ನಡ, ಭೌತವಿಜ್ಞಾನ ಮತ್ತು ಗಣಿತದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ. ‘ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಪೋಷಕರಿಗೆ ಈ ಫಲಿತಾಂಶ ಹೊಸ ಆಲೋಚನೆ ನೀಡಿದೆ’ ಎಂದು ಇದೇ ಕಾಲೇಜಿನಲ್ಲಿ ಓದಿದ್ದ ಜೆಸ್ಸಿ ಕಾ ತಂದೆ ಪ್ರಕಾಶ್ ಪಿಂಟೋ ಮತ್ತು ಅವರ ಸ್ನೇಹಿತ ಶ್ರೀರಾಮ ಜಮದಗ್ನಿ ಸಂತಸ ವ್ಯಕ್ತಪಡಿಸಿದ್ದಾರೆ.

‘ವಿದ್ಯಾರ್ಥಿಗಳು ಸರ್ಕಾರಿ ಕಾಲೇಜು ಎಂಬ ಕೀಳರಿಮೆ ಹೊಂದದೇ, ಸರ್ಕಾರದ ಯೋಜನೆ ಮತ್ತು ಸೌಲಭ್ಯಗಳ ಪ್ರಯೋಜನ ಪಡೆದಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ನನ್ನ ಮಗಳು ಸರ್ಕಾರಿ ಕಾಲೇಜಿನಲ್ಲಿ ಓದಿ ಉತ್ತಮ ಅಂಕ ಗಳಿಸಿ ಮಾದರಿ ಆಗಿರುವುದು ಹೆಮ್ಮೆಯ ವಿಷಯ’ ಎಂದು ಜೆಸ್ಸಿಕಾ ತಂದೆ ಪ್ರಕಾಶ್ ಪಿಂಟೋ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-36-1895959710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.