ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಪಿಯು ವಿಜ್ಞಾನ ವಿಭಾಗದಲ್ಲಿ ಶೇ 99.66 ಫಲಿತಾಂಶ ಪಡೆದು, ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಗಳಿಸಿದ್ದಾರೆ.

ಗೋಕಾಕ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಅವರು ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ 100ಕ್ಕೆ ನೂರು ಅಂಕ, ಇಂಗ್ಲಿಷ್ನಲ್ಲಿ 98 ಅಂಕ ಪಡೆದಿದ್ದಾರೆ. ಅಂಕಿತ್ ತಂದೆ ಭೀಮಪ್ಪ ಚಿಕ್ಕೋಡಿಯ ಸಿಮೆಂಟ್ ಅಂಗಡಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ತಾಯಿ ಸುನೀತಾ ಗೃಹಿಣಿ. ‘600ಕ್ಕೆ 600 ಅಂಕ ಪಡೆಯುವ ನಿರೀಕ್ಷೆ ಇತ್ತು. ನಿರಂತರ ಓದು, ಕಾಲೇಜಿನ ಪ್ರಾಧ್ಯಾಪಕರ ಬೆಂಬಲ ಮತ್ತು ಪಾಲಕರ ಪ್ರೋತ್ಸಾಹದಿಂದ ಯಶಸ್ಸು ಸಿಕ್ಕಿದೆ’ ಎಂದು ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-51-1054703006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.