ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೇಂಬ್ರಿಡ್ಜ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ 99ರಷ್ಟಿದೆ.

ವಿಜ್ಞಾನ ವಿಭಾಗದಲ್ಲಿ ಭಾವನಾ ಆರ್. ಅವರು 594 (ಶೇ 99) ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತನಿಷ್ಕಾ ಎಂ., ತನುಷಾ ಎಸ್. ಮತ್ತು ತನುಶ್ರೀ ಜೆ. ಅವರು ತಲಾ 593 (ಶೇ 98.83) ಅಂಕಗಳಿಸಿದ್ದು, ರಾಜ್ಯಕ್ಕೆ 8ನೇ ಸ್ಥಾನ ಪಡೆದಿದ್ದಾರೆ.

‘ನಿರಂತರ ಪ್ರಯತ್ನ, ಶಿಸ್ತು ಮತ್ತು ಸೂಕ್ತ ಮಾರ್ಗದರ್ಶನದಿಂದ ಉತ್ತಮ ಫಲಿತಾಂಶ ಸಾಧ್ಯವಾಗಿದೆ. ವಿದ್ಯಾರ್ಥಿಗಳ ಈ ಸಾಧನೆ ನಮಗೆ ಅಪಾರ ಹೆಮ್ಮೆಯನ್ನುಂಟುಮಾಡಿದೆ. ಅಧ್ಯಾಪಕರ ಸಮರ್ಪಣೆ, ಮಾರ್ಗದರ್ಶನ ಮತ್ತು ದಣಿವರಿಯದ ಪ್ರಯತ್ನಗಳೂ ಈ ಸಾಧನೆಯ ಹಿಂದಿದೆ’ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-4-1443255108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.