ಬೀದರ್: ಗ್ರಾಮೀಣ ಬಡ ಪ್ರತಿಭಾವಂತ ಮಕ್ಕಳಿಗೆ ಅನುಕೂಲವಾಗಲೆಂದು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 95ರಷ್ಟು ಅಂಕ ಗಳಿಸಿದವರಿಗೆ ಕರ್ನಾಟಕ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಉಚಿತ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.

ಸಂಸ್ಥೆ ಗುಣಾತ್ಮಕ ಶಿಕ್ಷಣಕ್ಕೆ ಹೆಸರಾಗಿದೆ. 1970ರಲ್ಲಿ ಆರಂಭವಾದ ಪದವಿ ಪೂರ್ವ ಕಾಲೇಜು ನಿರಂತರವಾಗಿ ಉತ್ತಮ ಶಿಕ್ಷಣ ನೀಡುತ್ತ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ಈಗ ಬಡ ಪ್ರತಿಭಾವಂತರಿಗೆ ಉಚಿತ ಶಿಕ್ಷಣ ಕೊಡಲು ಮುಂದಾಗಿದೆ. ಕಾಲೇಜಿನ ವಿದ್ಯಾರ್ಥಿಯೊಬ್ಬರು ಶೇ 98ರಷ್ಟು ಅಂಕ ಪಡೆದು ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 32 ವಿದ್ಯಾರ್ಥಿಗಳು ಅಗ್ರಶೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಹೇಳಿದ್ದಾರೆ.

ಈಗಾಗಲೇ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಅನಾನುಕೂಲದಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಕಾಲೇಜಿನ ಪ್ರಾಚಾರ್ಯ ಬಸವರಾಜ ಬಲ್ಲೂರ ಅವರ ಮೊಬೈಲ್ ಸಂಖ್ಯೆ: 9738418468 ಸಂಪರ್ಕಿಸಬಹುದು ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-33-1489798285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.