ನವದೆಹಲಿ (ಪಿಟಿಐ): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) 12ನೇ ತರಗತಿ ಪರೀಕ್ಷಾ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಶೇ. 85ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಲಿತಾಂಶ ಶೇ 3ರಷ್ಟು ಕುಸಿದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಮಾರು 94,028 ವಿದ್ಯಾರ್ಥಿಗಳು ಶೇ 90ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. 17,113 ವಿದ್ಯಾರ್ಥಿಗಳು ಶೇ 95ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕರಾದ ಸಾನ್ಯಂ ಭಾರದ್ವಾಜ್ ಅವರು ತಿಳಿಸಿದ್ದಾರೆ.

ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದು, ಶೇ 88ರಷ್ಟು ಉತ್ತೀರ್ಣರಾಗಿದ್ದಾರೆ. ಬಾಲಕರು ಶೇ 82ರಷ್ಟು ತೇರ್ಗಡೆಯಾಗಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾಂತರು ಶೇ 100ರಷ್ಟು ತೇರ್ಗಡೆಯಾಗಿದ್ದಾರೆ. 19,967 ಶಾಲೆಗಳು ಮತ್ತು 7,573 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸುಮಾರು 5.06 ಲಕ್ಷ ಮೇಲ್ವಿಚಾರಕರನ್ನು ನಿಯೋಜಿಸಲಾಗಿತ್ತು.

ಜುಲೈ 15ರಂದು ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜೂನ್ 2ರವರೆಗೆ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-1491799364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.