ಚನ್ನರಾಯಪಟ್ಟಣ: ‘ವಿದ್ಯಾರ್ಥಿಗಳು ಆಸಕ್ತಿ ಇರುವ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಗುರಿ ಸಾಧಿಸಬೇಕು’ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ ಹೇಳಿದರು.

ಪಟ್ಟಣದ ಕೋಟೆ ಪ್ರದೇಶದಲ್ಲಿ ಗಾಯತ್ರಿ ಪತ್ತಿನ ಸಹಕಾರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸೂಕ್ಷ್ಮದೃಷ್ಟಿಯಿಂದ ವಿಷಯ ಗ್ರಹಿಸಿಕೊಳ್ಳಬೇಕು. ಏಕಾಗ್ರತೆ ಮತ್ತು ಶ್ರದ್ಧೆಯಿಂದ ವ್ಯಾಸಂಗ ಮಾಡುವ ಮೂಲಕ ಯಶಸ್ಸು ಗಳಿಸಬೇಕು. ಕ್ರೀಡೆ, ವಿಜ್ಞಾನ, ಸಮಾಜ ವಿಜ್ಞಾನ, ವಾಣಿಜ್ಯ, ಸಂಗೀತ, ಕಲೆ ಮತ್ತು ಸಾಹಿತ್ಯ ಸೇರಿ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಬಹುದು’ ಎಂದರು.

‘ವಿದ್ಯಾರ್ಥಿಗಳು ಓದುವ ಜೊತೆಗೆ ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಬೇಕು. ಎಂದಿಗೂ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇರಬಾರದು. ಗುರಿ ಸಾಧಿಸುವ ಅದಮ್ಯ ಚೈತನ್ಯ ಅಗತ್ಯ. ಕೌಶಲ ಮತ್ತು ಅತ್ಮವಿಶ್ವಾಸ ಇದ್ದರೆ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಅವಕಾಶ ನಿಮ್ಮದಾಗುತ್ತದೆ’ ಎಂದು ತಿಳಿಸಿದರು.

ಸಹಕಾರ ಸಂಘದ ಅಧ್ಯಕ್ಷ ಸಿ.ಆರ್. ನಾಗರಾಜ ಮಾತನಾಡಿ, ‘ಸಂಘ ಆರಂಭವಾದಾಗ ₹5 ಲಕ್ಷ ಬಂಡವಾಳ ಹೊಂದಿತ್ತು. ಈಗ ಪ್ರತಿ ವರ್ಷ ಒಂದು ಕೋಟಿ ಲಾಭ ಗಳಿಸುತ್ತಿದೆ. ಇದಕ್ಕೆ ಸಂಘದ ಎಲ್ಲರ ಸಹಕಾರ ಕಾರಣ. ಪ್ರತಿ ದಿನ ಎರಡು ಲಕ್ಷ ರೂಪಾಯಿ ಪಿಗ್ಮಿ ಸಂಗ್ರಹಿಸಲಾಗುತ್ತಿದೆ’ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಿ.ಟಿ. ವಿಶ್ವನಾಥ್, ನಿರ್ದೇಶಕ ಎ.ಎಂ. ಜಯರಾಂ ಭಾಗವಹಿಸಿದ್ದರು. ಎಸ್ಎಸ್ಎಲ್ಸಿ ಹಾಗೂ ಪಿಯು ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-1264513344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.