ಚಿಕ್ಕಬಳ್ಳಾಪುರ: ತಂದೆ ತಾಯಿಯ ಕನಸುಗಳನ್ನು ಸಾಕಾರಗೊಳಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಮಂಗಳ ನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಎಸ್.ಜೆ.ಸಿ.ಐ.ಟಿ ಕ್ಯಾಂಪಸ್ನಲ್ಲಿ ಸೋಮವಾರ ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ‘ಸ್ವಸ್ತಿ-2026’ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ಸಂಸ್ಕಾರ ಮತ್ತು ಶಿಕ್ಷಣ ಪಡೆದು ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ಬೆಳೆಯಬೇಕು ಎಂದರು.

ಪಿಯುಸಿ ಹಂತ ಸಾಧನೆಗೆ ಸ್ಪೂರ್ತಿ. ಪ್ರತಿ ಪೋಷಕರ ಬದುಕಿನ ಸಾರ್ಥಕತೆ ಮಗ, ಮಗಳ ಓದಿನ ಮೇಲೆ ನಿರ್ಧಾರಿಸಲಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮಗ್ನರಾಗಬೇಕು. ಭವಿಷ್ಯದಲ್ಲಿ ಸಾಧನೆಯ ಉತ್ತುಂಗ ಮಟ್ಟ ತಲುಪಬೇಕು ಎಂದು ಹೇಳಿದರು.

ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಮಾತನಾಡಿ, ಕಾಲೇಜು ದಿನಗಳು ಕೇವಲ ಶಿಕ್ಷಣ ಪಡೆಯುವ ಸಮಯವಲ್ಲ. ಜೀವನದ ಅತ್ಯುತ್ತಮ ನೆನಪುಗಳನ್ನು, ಅನುಭವಗಳನ್ನು ಮತ್ತು ವ್ಯಕ್ತಿತ್ವವನ್ನು ರೂಪಿಸುವ ಸುವರ್ಣಾವಕಾಶ ಎಂದರು.

ಯುವ ಸಮುದಾಯ ತಮ್ಮ ಜವಾಬ್ದಾರಿ ಅರಿತು ವ್ಯಕ್ತಿತ್ವ ವಿಕಸನದ ಜೊತೆಗೆ ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಬೇಕು. ಶಿಕ್ಷಣದ ಜೊತೆಗೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವ್ಯಕ್ತಿತ್ವ ಬಲಪಡಿಸಿಕೊಳ್ಳಬೇಕು ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಂಢರಿನಾಥ ಎಸ್., ‘ವಿದ್ಯೆ ಇಲ್ಲದವನು ಕಣ್ಣಿದ್ದರೂ ಕುರುಡನಂತೆ ಎಂಬ ಮಾತನ್ನು ನಾವೆಲ್ಲರೂ ಕೇಳಿದ್ದೇವೆ. ಶಿಕ್ಷಣವು ಕೇವಲ ಪುಸ್ತಕದ ಜ್ಞಾನ ನೀಡುವುದಲ್ಲ. ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಇದು ನಮ್ಮಲ್ಲಿ ಸೃಜನಶೀಲತೆ, ಸಮಸ್ಯೆಗಳನ್ನು ಪರಿಹರಿಸುವ ಕೌಶಲ ಮತ್ತು ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಬೆಳೆಸುತ್ತದೆ’ ಎಂದು ಹೇಳಿದರು.

ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದ ಭುವನ ಸಿ.ಎ, ಮತ್ತು ಆರನೇ ರ್ಯಾಂಕ್ ಪಡೆದ ರಶ್ಮಿ ಕೆ.ಎಸ್, ವಿಜ್ಞಾನ ವಿಭಾಗದಲ್ಲಿ ಐದನೇ ರ್ಯಾಂಕ್ ಪಡೆದ ಸಮೀಕ್ಷಾ ಎನ್. ಅವರನ್ನು ಸನ್ಮಾನಿಸಲಾಯಿತು.

ಎಸ್.ಜೆ.ಸಿ.ಐ.ಟಿ ಪ್ರಾಂಶುಪಾಲ ಜಿ.ಟಿ ರಾಜು, ಬಿ.ಜಿ.ಎಸ್ ಶಿಕ್ಷಣ ಸಂಸ್ಥೆ ಮಾಲೂರು ಶಾಖೆಯ ಕಾರ್ಯದರ್ಶಿ ಬೈಯ್ಯಣ್ಣ, ಬಿಜಿಎಸ್ ಪಿಯು ಕಾಲೇಜುಗಳ ಡೀನ್ ಎನ್. ಮಧುಸೂಧನ್, ಪ್ರಾಂಶುಪಾಲ ಎಚ್.ಬಿ. ರಮೇಶ್, ಉಪಪ್ರಾಂಶುಪಾಲ ಜೆ. ಚಂದ್ರಮೋಹನ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-400106064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.