ಚಿಂತಾಮಣಿ: ತಾಲ್ಲೂಕಿನ ಮುರುಗಮಲ್ಲ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ಸರ್ಕಾರಿ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಪ್ರಕಾರ ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ, ಬಾಗೇಪಲ್ಲಿ ತಾಲ್ಲೂಕಿನ ತಿಮ್ಮಂಪಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗಳು ಪಿಯು ಕಾಲೇಜುಗಳಾಗಿ ಉನ್ನತೀಕರಣಗೊಂಡಿವೆ. ಇದರೊಂದಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಗಳಿಗೆ ತೆರಳುವುದು ತಪ್ಪುತ್ತದೆ. ಜೊತೆಗೆ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ತೆರಳಬೇಕು ಎಂಬ ಕಾರಣಕ್ಕೆ ಎಸ್ಎಸ್ಎಲ್ಸಿ ಬಳಿಕ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ವಿಶೇಷವಾಗಿ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನೇ ಮೊಟಕುಗೊಳಿಸುವ ಉದಾಹರಣೆಗಳು ಹೆಚ್ಚು ಸಿಗುತ್ತವೆ. ಇಂಥ ಘಟನೆಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ಈ ಕ್ರಮ ಕೈಗೊಂಡಿದೆ.

ಈ ಕಾಲೇಜುಗಳಿಗೆ ಪ್ರಭಾರ ಪ್ರಾಂಶುಪಾಲರನ್ನು ನಿಯೋಜಿಸಲಾಗಿದೆ. ಬೋಧನಾ ಪ್ರಕ್ರಿಯೆಗೆ ಅನುಕೂಲವಾಗುವಂತೆ ಕಾರ್ಯಾಭಾರ ಕಡಿಮೆ ಇರುವ ಅನ್ಯ ಪಿಯು ಕಾಲೇಜುಗಳ ಉಪನ್ಯಾಸಕರನ್ನು ನಿಯಮಾನುಸಾರ ಹೊಸ ಕಾಲೇಜುಗಳಿಗೆ ನಿಯೋಜಿಸಲು ಪಿಯು ಉಪನಿರ್ದೇಶಕರಿಗೆ ಸೂಚಿಸಲಾಗಿದೆ.

ಉನ್ನತೀಕರಣಗೊಂಡ ಹೊಸ ಪಿಯು ಕಾಲೇಜುಗಳಲ್ಲಿ 2026–27ನೇ ಸಾಲಿನಲ್ಲಿ ವಾಣಿಜ್ಯ ವಿಭಾಗ ಆರಂಭವಾಗಲಿದೆ. ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಇಬಿಎಸಿಎಸ್ ಸಂಯೋಜನೆ ಮಾಡಲಾಗಿದೆ. ಆದರೆ, ಪ್ರಸ್ತುತ ಕಲಾ ಮತ್ತು ವಿಜ್ಞಾನ ವಿಭಾಗ ಆರಂಭಕ್ಕೆ ಅವಕಾಶ ಕಲ್ಪಿಸಿಲ್ಲ. ಮುಂದಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪರಿಗಣಿಸಿ, ಆ ವಿಭಾಗಗಳನ್ನು ಮಂಜೂರು ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.

ಜೊತೆಗೆ, ಉನ್ನತೀಕರಣಗೊಂಡ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿಯಲ್ಲಿ ಕನಿಷ್ಠ 40 ವಿದ್ಯಾರ್ಥಿಗಳಿರಬೇಕು. 15 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಪಿಯು ಕಾಲೇಜುಗಳು ಇರಬಾರದು ಎಂಬ ಷರತ್ತನ್ನು ಸರ್ಕಾರ ವಿಧಿಸಿದೆ.

ಹೊಸ ಕಾಲೇಜುಗಳಿಗೆ ಪ್ರಭಾರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ನಿಯೋಜನೆಗೆ ಕ್ರಮ ವಹಿಸಲಾಗಿದೆ. ಕಡಿಮೆ ಕಾರ್ಯಭಾರವಿರುವ ಕಾಲೇಜುಗಳಲ್ಲಿನ ಉಪನ್ಯಾಸಕರನ್ನು ಹೊಸ ಕಾಲೇಜುಗಳಿಗೆ ನಿಯೋಜಿಸಲಾಗುವುದು. ವಿದ್ಯಾರ್ಥಿಗಳ ದಾಖಲಾತಿ ನಡೆಯುತ್ತಿದೆ. ಜೂನ್ 1ಕ್ಕೆ ತರಗತಿಗಳು ಆರಂಭವಾಗಲಿದ್ದು ಪೂರ್ವಸಿದ್ಧತೆ ನಡೆಯುತ್ತಿದೆ ಎಂದು ಪಿಯು ಉಪನಿರ್ದೇಶಕ ಆದಿಕೇಶವುಲು ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-16-1058546991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.