ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಅನಧಿಕೃತ ಕಾಲೇಜುಗಳ ಭಿತ್ತಿಪತ್ರಗಳು, ಸಾಮಾಜಿಕ ಜಾಲತಾಣ ಮತ್ತು ಇನ್ನಿತರ ಪ್ರಚಾರಕ್ಕೆ ಮರುಳಾಗಿ ಆ ಕಾಲೇಜುಗಳಿಗೆ ಮಕ್ಕಳನ್ನು ದಾಖಲಿಸಬಾರದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ವಿನಂತಿಸಿದ್ದಾರೆ.

ಮಕ್ಕಳ ಭವಿಷ್ಯ ಗಮನದಲ್ಲಿ ಇಟ್ಟುಕೊಂಡು ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜುಗಳಿಗೆ ದಾಖಲಾತಿ ಮಾಡಬೇಕು. ಚಿಂತಾಮಣಿ ಸೂಪರ್ ಮಾರ್ಕೆಟ್ ಎದುರು ಮತ್ತು ಪ್ರಭಾಕರ್ ಬಡಾವಣೆಯ ಅಂಜಲಿ ಎಕ್ಸ್ಟೆಂಕ್ಷನ್ನಲ್ಲಿ ನಡೆಯುತ್ತಿರುವ ಜೆ.ಪಿ. ಅಕಾಡೆಮಿ, ಗೌರಿಬಿದನೂರು ಬೈಪಾಸ್ ರಸ್ತೆಯಲ್ಲಿರುವ ಆದ್ಯ ಪಿ.ಯು ಕಾಲೇಜು ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ನಡೆಯುತ್ತಿವೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಜಾಗೃತರಾಗಬೇಕು. ಕಾಲೇಜುಗಳಲ್ಲಿ ಪ್ರವೇಶಕ್ಕೆ ದಾಖಲಾತಿ ಆಗಬಾರದು. ಜಿಲ್ಲೆಯಲ್ಲಿ ಮಾ.18 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿ ಆಂದೋಲನ ಪ್ರಕ್ರಿಯೆಯನ್ನು ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ ಎಂದಿದ್ದಾರೆ.

ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನುರಿತ ಬೋಧಕರ ಜತೆಗೆ ಅತಿ ಕಡಿಮೆ ಶುಲ್ಕ (ಹೆಣ್ಣು ಮಕ್ಕಳಿಗೆ ಶುಲ್ಕ ವಿನಾಯಿತಿ ಇದೆ) ಹಾಗೂ ಕಲಿಕೆಗೆ ಪೂರಕ ಮೂಲ ಸೌಲಭ್ಯ ಹೊಂದಿವೆ. ಆದ್ದರಿಂದ ಪೋಷಕರು ಪ್ರಥಮ ಆದ್ಯತೆ ನೀಡಿ ಮಕ್ಕಳನ್ನು ಸರ್ಕಾರಿ ಕಾಲೇಜುಗಳಿಗೆ ದಾಖಲಿಸಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-16-1133910481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.