ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ 9ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 6ನೇ ಸ್ಥಾನಕ್ಕೆ ಜಿಗಿದಿದೆ. ಸಾಯಿ ಏಂಜಲ್ಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೇಷ್ಠಾ ಎಸ್.ಕಾಮತ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಕಳೆದ ವರ್ಷ ಶೇ 79.56 ಫಲಿತಾಂಶ ಪಡೆದು 9ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ವರ್ಷ ಶೇ 90.24ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ 10.68ರಷ್ಟು ಫಲಿತಾಂಶ ಏರಿಕೆಯಾಗಿದೆ.

ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠಾ ಕಾಮತ್ 600ಕ್ಕೆ 596 ಅಂಕಗಳನ್ನು ಗಳಿಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 8,692 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 7,617 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಎದುರಿಸಿದ್ದ 3, 718 ಬಾಲಕರ ಪೈಕಿ 3,144 ಬಾಲಕರು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಎದುರಿಸಿದ್ದ 4, 974 ವಿದ್ಯಾರ್ಥಿನಿಯರಲ್ಲಿ 4,473 ಬಾಲಕಿಯರು ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ 3,552 ವಿದ್ಯಾರ್ಥಿಗಳ ಪೈಕಿ 3,270 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 92.06ರಷ್ಟು ಫಲಿತಾಂಶ ತಂದುಕೊಟ್ಟಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ 2,843 ವಿದ್ಯಾರ್ಥಿಗಳ ಪೈಕಿ 2,555 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 89.87ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ 2,297 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,792 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ 78.01ರಷ್ಟು ಫಲಿತಾಂಶ ತಂದುಕೊಟ್ಟಿದ್ದಾರೆ.

ಗ್ರಾಮೀಣ ಮಕ್ಕಳದ್ದೇ ಮೇಲುಗೈ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದಿಂದ ಒಟ್ಟು 4,275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 3,930 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 91.93ರಷ್ಟು ಫಲಿತಾಂಶ ಬಂದಿದೆ. ನಗರ ಪ್ರದೇಶದಲ್ಲಿ 4,417 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 3, 687 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 83.47ರಷ್ಟು ಫಲಿತಾಂಶ ಬಂದಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-126-1701809285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.