ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನವನ್ನು ಕಾಯ್ದುಕೊಂಡಿದ್ದು, ಶೇಕಡಾವಾರು ಸಾಧನೆಯಲ್ಲಿ ಏರಿಕೆ ದಾಖಲಿಸಿದೆ. ಕಳೆದ ವರ್ಷ ಜಿಲ್ಲೆಯ ಒಟ್ಟು ಫಲಿತಾಂಶ ಶೇ 93.57ರಷ್ಟು ದಾಖಲಾಗಿದ್ದರೆ, ಈ ಬಾರಿ ಶೇ 96.35ರಷ್ಟು ಸಾಧನೆಯಾಗಿದೆ.

ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ದಿಶಾ ಕೋಟ್ಯಾನ್ 600ಕ್ಕೆ 600 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ, ಸೇಂಟ್ ಅಲೋಶಿಯಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಚೆಲ್ ಡಿಸೋಜ 599 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಸಿಎಫ್ಎಎಲ್ ಕಾಲೇಜಿನ ಪ್ರಿನ್ಸಿಲ್ಲಾ ಕಾರ್ಡೋಜ 599 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ, ಎಕ್ಸ್ಪರ್ಟ್ ಪಿ.ಯು ಕಾಲೇಜಿನ ಸಮನ್ಯು ಶೆಟ್ಟಿ ಮತ್ತು ನಂದನ್ ನಾಯಕ್ ಹಾಗೂ ಶಾರದಾ ಪಿ.ಯು ಕಾಲೇಜಿನ ವೈಭವಿ 598 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 37,140 (ರೆಗ್ಯುಲರ್, ಪುನರಾವರ್ತಿತ ಹಾಗೂ ಖಾಸಗಿ) ವಿದ್ಯಾರ್ಥಿಗಳಲ್ಲಿ 35,190 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ 35,449 ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ 34,155 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉತ್ತೀರ್ಣರಾದವರಲ್ಲಿ ಶೇ 96.32 ಹೆಣ್ಣು ಮಕ್ಕಳು ಹಾಗೂ ಶೇ 93.19 ಗಂಡು ಮಕ್ಕಳು.

ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 3,273 ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ 2,887 ಮಂದಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 13,804 ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ 13,265 ಮಂದಿ, ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 18,372 ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ 18,003 ಮಂದಿ ಉತ್ತೀರ್ಣರಾಗಿದ್ದಾರೆ.

ಗ್ರಾಮೀಣ ಭಾಗದ ಫಲಿತಾಂಶ ಶೇ 96.45 ಆಗಿದ್ದರೆ, ನಗರದ ಕಾಲೇಜುಗಳು ಒಟ್ಟು ಫಲಿತಾಂಶ ಶೇ 96.26ರಷ್ಟಾಗಿದೆ.

2021- 22ನೇ ಸಾಲಿನಿಂದ ಸತತವಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. 2021-22ನೇ ಸಾಲಿನಲ್ಲಿ ಶೇ 88.02 ಫಲಿತಾಂಶ, 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ 95.33 ಫಲಿತಾಂಶ, 2023–24ರಲ್ಲಿ ಶೇ 97.37 ಫಲಿತಾಂಶ, 2024–25ರಲ್ಲಿ 93.57 ಫಲಿತಾಂಶ ದಾಖಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-553270152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.