ದಾವಣಗೆರೆ: ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯವು ತನ್ನ ವಜ್ರಮಹೋತ್ಸವ ಆಚರಿಸಿಕೊಳ್ಳುತ್ತಿರುವ ಅಂಗವಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಉಚಿತ ಶಿಕ್ಷಣ ನೀಡಲು ಮುಂದಾಗಿದೆ ಎಂದು ತುಂಗಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಂ.ಎಸ್. ರಮೇಶ್ ತಿಳಿಸಿದ್ದಾರೆ.

1967ರಲ್ಲಿ ಆರಂಭವಾದ ಸಂಸ್ಥೆಯು ತುಂಗಾ ವಿದ್ಯಾವರ್ಧಕ ಸಂಘದ ಮೂಲಕ ಪದವಿಪೂರ್ವ, ಪದವಿ ಹಾಗೂ ಎಂ.ಕಾಂ. ಸ್ನಾತಕೋತ್ತರ ಅಧ್ಯಯನ ಕೇಂದ್ರಗಳನ್ನು ನಡೆಸಿಕೊಂಡು ಬಂದಿದೆ. 60 ವರ್ಷಗಳ ಹಿಂದೆ ಮಲೆನಾಡಿನಲ್ಲಿ ವಿದ್ಯೆಯ ಬೆಳಕು ಮೂಡಿಸಲು ಶ್ರಮಿಸಿದ ಬಿ.ಎನ್. ರಂಗಪ್ಪ, ಕಾಸರವಳ್ಳಿ ರಾಮಕೃಷ್ಣರಾಯರು ಹಾಗೂ ಕಲ್ಲಹಳ್ಳ ರಾಮಭಟ್ ಅವರ ಅಚಲ ಪರಿಶ್ರಮದ ಫಲವಾಗಿ ಇಂದು ಸಂಸ್ಥೆಯು ಅತ್ಯುನ್ನತ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಹೇಳಿದ್ದಾರೆ.

ವಜ್ರಮಹೋತ್ಸವದ ಕಾಣಿಕೆಯಾಗಿ 2026-2027ನೇ ಸಾಲಿನಲ್ಲಿ ಪ್ರವೇಶಾತಿ ಪಡೆಯುವ ಹಾಗೂ ಶೇ 70ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2 ವರ್ಷ ಉಚಿತ ಶಿಕ್ಷಣ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸೌಲಭ್ಯ ಕಲ್ಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಎಂ.ಎನ್. ರಮೇಶ್ (99866 78421), ಆರ್. ಕುಮಾರಸ್ವಾಮಿ (9916880684), ಕೆ.ಎಲ್. ಪ್ರಸನ್ನ (99168 80684) ಅಥವಾ ಆದರ್ಶ್ ಮಂಡಗದ್ದೆ (97316 58179) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-43-1520711213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.