ದೇವದುರ್ಗ: ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿತ, ಫಲಿತಾಂಶದಲ್ಲಿ ಕಳಪೆ ಸಾಧನೆಯ ಕಾರಣಕ್ಕೆ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮುಚ್ಚುವ ಹಂತ ತಲುಪಿದೆ.

ಈ ಕಾಲೇಜು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿದೆ. 2023-24ರಲ್ಲಿ 33 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೈಕಿ ಕೇವಲ ನಾಲ್ವರು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು.

2024-25ನೇ ಸಾಲಿನಲ್ಲಿ 22 ವಿದ್ಯಾರ್ಥಿಗಳ ಪೈಕಿ ಕೇವಲ ಇಬ್ಬರು ಉತ್ತೀರ್ಣರಾಗಿದ್ದರು. 2025–26ನೇ ಸಾಲಿನಲ್ಲಿ 16 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಿದ್ದು, ಕೇವಲ 7 ಜನ ಉತ್ತೀರ್ಣಗೊಂಡಿದ್ದಾರೆ.

ಕಾಲೇಜಿನಲ್ಲಿ ಕನ್ನಡ, ಇತಿಹಾಸ, ಅರ್ಥಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಷಯಕ್ಕೆ ಕಾಯಂ ಉಪನ್ಯಾಸಕರಿದ್ದು, ರಾಜ್ಯಶಾಸ್ತ್ರ ಮತ್ತು ಇಂಗ್ಲಿಷ್ ವಿಷಯದ ಉಪನ್ಯಾಸಕರಿಲ್ಲದ ಕಾರಣ ಅತಿಥಿ ಉಪನ್ಯಾಸಕರನ್ನು ನೇಮಿಸಿ ಕೊಳ್ಳಲಾಗಿದೆ.

ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಕೋ ಎಜುಕೇಶನ್ ಅನುಮತಿ ಹೊಂದಿದ್ದು, ಬಾಲಕಿಯರಿಗೂ ದಾಖ ಲಾತಿಗೆ ಅವಕಾಶ ಇದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಹೊಂದಿದ್ದ ಈ ಕಾಲೇಜಿನ ಹಿಂದಿನ ಪ್ರಾಂಶುಪಾಲ ಭೀಮಪ್ಪ ದೊಡ್ಡಮನಿ ದಾಖಲಾತಿಗೆ ಬರುವ ಮಕ್ಕಳ ದಾರಿ ತಪ್ಪಿಸಿ, ಮೂಲ ಸೌಕರ್ಯ ಮತ್ತು ತರಗತಿ ನಡೆಸಲು ಉಪನ್ಯಾಸಕರಿಲ್ಲ ಎಂದು ಹೇಳುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.

ಪರಿಣಾಮ ಕಾಲೇಜಿನ ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಉಪನ್ಯಾಸಕ ಹುದ್ದೆಗಳನ್ನೇ ಬೇರೆ ಜಿಲ್ಲೆಗೆ ವರ್ಗಾಯಿಸಲಾಗಿದೆ. ಇಲಾಖೆ ನೀಡಿದ್ದ ಪ್ರಯೋಗಾಲ ಯದ ಸಲಕರಣೆಗಳನ್ನು ಖಾಸಗಿ ಶಾಲೆಗೆ ಮಾರಾಟ ಮಾಡಿಕೊಂಡಿದ್ದಾರೆ ಎಂದು ಸಿಬ್ಬಂದಿ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆದಿದೆ ಎಂದು ಹೇಳಿದ್ದಾರೆ.

‘ಪ್ರಸ್ತುತ ಪ್ರಾಂಶುಪಾಲ ಶ್ರೀಕಾಂತ ಕೂಡ ಅದೇ ಚಾಳಿ ಮುಂದುವರಿಸಿದ್ದಾರೆ. ಕಾಲೇಜು ಸಮಯ ಬೆಳ್ಳಿಗೆ 9.30ರಿಂದ ಮಧ್ಯಾಹ್ನ 3.30 ರವರೆಗೆ ಇದೆ. ಆದರೆ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಲೇಜು ಬಾಗಿಲು ಹಾಕಿರುತ್ತದೆ’ ಎಂದು ದೂರುತ್ತಾರೆ.

‘ದಾಖಲಾತಿಗೆ ಬರುವ ಗ್ರಾಮೀಣ ಪ್ರದೇಶದ ಮಕ್ಕಳು ಅನಿವಾರ್ಯವಾಗಿ ಖಾಸಗಿ ಕಾಲೇಜಿನತ್ತ ಮುಖ ಮಾಡುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ಪ್ರಾಂಶುಪಾಲ ಮತ್ತು ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ ಇರುವ ಕಾರಣ ಕಾಲೇಜು ಮುಚ್ಚುವ ಹಂತಕ್ಕೆ ಬಂದು ನಿಂತಿದೆ’ ಎಂದು ಆರೋಪಿಸುತ್ತಾರೆ.

‘ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ದೇವದುರ್ಗ ತಾಲ್ಲೂಕಿನತ್ತ ಗಮನಹರಿಸಿ, ಸಿಬ್ಬಂದಿಗೆ ಕರ್ತವ್ಯದ ಪಾಠ ಮಾಡಬೇಕು. ಸರ್ಕಾರಿ ಕಾಲೇಜು ಬಲವರ್ಧನೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-32-260753591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.