ಗದಗ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ– 2 ಅನ್ನು ಏಪ್ರಿಲ್ 30ರಿಂದ ಮೇ 13ರವರೆಗೆ ನಡೆಸಲಿದೆ.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಸೇರಿದಂತೆ ಇನ್ನಿತರೆ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ.

ಏ.30ರಿಂದ ಮೇ 13ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಬೆಳಿಗ್ಗೆ 8ರಿಂದ ಸಂಜೆ 5.30ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-23-391741308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.