ಗದಗ: ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿಗಳ ವಿತರಣೆ ಹಾಗೂ 2025-26ನೇ ಸಾಲಿನಲ್ಲಿ ಸೇವಾ ನಿವೃತ್ತಿ ಹೊಂದಿದ ಸಂಘದ ನೌಕರ ಸದಸ್ಯರಿಗೆ ಹಾಗೂ ಸಂಘದ ಹಿರಿಯ ನಿವೃತ್ತ ನೌಕರ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಮೇ 24ರಂದು ಬೆಳಿಗ್ಗೆ 9.30ಕ್ಕೆ ನಗರದ ವಿಶ್ವಕರ್ಮ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಶ್ವಕರ್ಮ ಭವನ, ವಿದ್ಯಾರ್ಥಿ ವಸತಿನಿಲಯಗಳ ಕಟ್ಟಡಕ್ಕೆ ದೇಣಿಗೆ ನೀಡಿದ ಮಹಾದಾನಿಗಳ ಭಾವಚಿತ್ರ ಅನಾವರಣ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ವಿಶ್ವಕರ್ಮ ಸಮಾಜದ ನೌಕರ ಸಂಘಗಳ ಅಧ್ಯಕ್ಷರಿಗೆ ಸನ್ಮಾನ ನಡೆಯಲಿದೆ.

2025-26 ನೇ ಸಾಲಿನ ಪರೀಕ್ಷೆಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರು. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಮೊದಲ ಮೂರು ಸ್ಥಾನ ಪಡೆದ ಜಿಲ್ಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿಶೇಷ ಪ್ರತಿಭಾ ಪುರಸ್ಕಾರ ಹಾಗೂ ಉಳಿದ ಎಲ್ಲ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರದೊಂದಿಗೆ ಸನ್ಮಾನಿಸಿ ಗೌರವಿಸಲಾಗುವುದು.

ಅರ್ಜಿ ಸಲ್ಲಿಸುವರರು ದೃಢೀಕರಿಸಿದ ಅಂಕಪಟ್ಟಿ, ಆಧಾರ್ ಕಾರ್ಡ್, ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಮೇ 18ರೊಳಗಾಗಿ ಸಂಘದ ಗೂಗಲ್ ಫಾರ್ಮನಲ್ಲಿ ಅಥವಾ ಖುದ್ದಾಗಿ ಸಂಘದ ಕಾರ್ಯಾಲಯದಲ್ಲಿ ಅಥವಾ ತಾಲ್ಲೂಕು ನಿದರ್ಶಕರಿಗೆ ಅಥವಾ ಆಯ್ಕೆ ಸಮಿತಿಯವರಿಗೆ ಸಲ್ಲಿಸಬೇಕು.

ಸಂಪರ್ಕಕ್ಕೆ: ಪಿಯುಸಿ ವಿಭಾಗ ಕೆ.ಎಸ್. ಬಡಿಗೇರ- 9482176166, ಆರ್.ಎಂ.ಬಡಿಗೇರ- 9916765934

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-23-1881172431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.