ಗಂಗಾವತಿ: ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 81.69ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇ 85.71, ವಾಣಿಜ್ಯ ವಿಭಾಗದಲ್ಲಿ ಶೇ 85.71, ವಿಜ್ಞಾನ ವಿಭಾಗದಲ್ಲಿ ಶೇ 72.46ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದಿಂದ 106 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 11ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 64 ಪ್ರಥಮ ದರ್ಜೆ, 07 ದ್ವೀತಿಯ ದರ್ಜೆ, 08 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ಜಗದೀಶ ರಾಠೋಡ್ 567 ಅಂಕಗಳಿಸಿ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 03 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 14 ಪ್ರಥಮ ದರ್ಜೆ, 05 ದ್ವಿತೀಯ ದರ್ಜೆ, 02 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ವಿದ್ಯಾರ್ಥಿನಿ ಬಾಳಮ್ಮ ವಡ್ಡರಹಟ್ಟಿ 567 ಅಂಕ ಗಳಿಸಿ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 70 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 02 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 39 ಪ್ರಥಮ ದರ್ಜೆ, 06 ದ್ವೀತಿಯ ದರ್ಜೆ, 03 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ವಿದ್ಯಾರ್ಥಿ ವಿಶ್ವನಾಥ 575 ಅಂಕ ಗಳಿಸಿ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದು, ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಬಸಪ್ಪ ನಾಗೋಲಿ ಸೇರಿದಂತೆ ಕಾಲೇಜು ಆಡಳಿತ ಮಂಡಳಿ, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-35-1990656597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.